4:21 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ ಕಾಟದಿಂದ ದಿಕ್ಕೆಟ್ಟ ಹರಿಣಿಯ ರಕ್ಷಣೆ

18/07/2026, 19:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಕಾಡಿನಿಂದ ವನ್ಯಜೀವಿಗಳು ನಾಡಿನತ್ತ ಬರುವುದು ಹೊಸತೇನಲ್ಲ, ಅದರಂತೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪಟ್ಟಣಕ್ಕೆ ಚುಕ್ಕಿ ಜಿಂಕೆಯೊಂದು ಆಹಾರ ಅರಸಿಯೋ, ಇಲ್ಲಾ ತನ್ನ ಹಿಂಡು ಇಂದ ಬೆರ್ಪಟ್ಟು ಪ್ರವೇಶಿಸಿದೆ.ಕೊಡವ ಸಮಾಜದ ರಸ್ತೆಯಿಂದ ಮುಖ್ಯ ರಸ್ತೆಗೆ ಓಡಿ ಬಂದ ಈ ಅಮಾಯಕ ಜೀವಿ ಒಂದೆಡೆ ವಾಹನ ದಟ್ಟಣೆ, ಬೀದಿ ನಾಯಿಗಳ ದಾಳಿಯಿಂದ ದಿಕ್ಕು ತೋಚದೆ ಪಟ್ಟಣದೆಲ್ಲಡೆ ಓಡಾಡಿದೆ.


ಸ್ಥಳೀಯರು ಹಿಡಿಯುವ ಪ್ರಯತ್ನ ಮಾಡಿದರು ಸಾಧ್ಯವಾಗಿಲ್ಲ ಹೀಗೆ ಮುಖ್ಯ ರಸ್ತೆಯಲ್ಲೇ ಬಸ್ ನಿಲ್ದಾಣ ಮೂಲಕ ಬೇತು ಗ್ರಾಮದ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಬಳಿ, ಸ್ಥಳೀಯಯುವಕರಾದ ರಫೀಕ್ ಮತ್ತು ಇಸ್ಮಾಯಿಲ್ ಜಿಂಕೆಯನ್ನು ಹಿಡಿಯುವಲ್ಲಿ ಯಶಸ್ವಿಯಾದರು, ಆಗಲೇ ಸಣ್ಣ ಪುಟ್ಟ ಗಾಯಕ್ಕೆ ಒಳಗಾಗಿದ್ದ ಜೀವಿಯನ್ನು ನೀರು ನೀಡಿ ಆರೈಕೆ ಮಾಡಿದರು.ಬಳಿಕ ಪೊಲೀಸ್ ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು.ಅರಣ್ಯ ಇಲಾಖೆ ಸಿಬ್ಬಂದಿಗಳು ಪ್ರಥಮ ಚಿಕಿತ್ಸೆ ನೀಡಿ ತಲಕಾವೇರಿ ವನ್ಯ ಜೀವಿ ವಿಭಾಗದ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು