ಇತ್ತೀಚಿನ ಸುದ್ದಿ
ದೀರ್ಘಾವಧಿ ಸಾಲ 137.85 ಕೋಟಿಗಳ ಅನುದಾನ ವಿನಿಯೋಗ: ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ
03/01/2025, 10:54
ಬೆಂಗಳೂರು(reporterkarnataka.com):ಭಾರತ ಸರ್ಕಾರದ ಆರ್ಥಿಕ ಸಚಿವಾಲಯವು ವಿಶೇಷ ಬಂಡವಾಳ ನೆರವಿನ ಯೋಜನೆಯ ಭಾಗ 7 (ಎ) ಅಡಿ ಕರ್ನಾಟಕದ ರಾಜ್ಯಕ್ಕೆ ಬಂಡವಾಳ ವೆಚ್ಚಕ್ಕಾಗಿ ದೀರ್ಘಾವಧಿ ಸಾಲದ ರೂಪದಲ್ಲಿ ನೀಡಿರುವ 137.85 ಕೋಟಿಗಳ ಅನುದಾನವನ್ನು ವಿನಿಯೋಗಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಸಾಮರ್ಥ್ಯ ಹಾಗೂ ವಿಶ್ವಾಸಾರ್ಹತೆಯ ಹಿನ್ನೆಲೆಯಲ್ಲಿ ಸಾಲವನ್ನು ಪಡೆಯಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು. ಜನಕಲ್ಯಾಣದ ಜೊತೆಗೆ ಅಭಿವೃದ್ದಿ ಗಮನದಲ್ಲಿದೆ ಹಾಗೂ ಹೊರೆಯನ್ನು ಸರಿದೂಗಿಸುವ ವ್ಯವಹಾರಿಕತೆಯ ಹಿನ್ನೆಲೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು.
ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆಯವರು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ಸಮಾಪನಗೊಳಿಸುವ ಬಗ್ಗೆ ರಾಜ್ಯ ಸಚಿವ ಸಂಪುಟ ಎಂದು ನಿರ್ಣಯ ತೆಗೆದುಕೊಂಡಿದೆ.
ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯವರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ 2022-23 23ನೇ ಸಾಲಿನ ಎಸ್ ಸಿ ಪಿ, ಟಿ ಎಸ್ ಪಿ ಯೋಜನೆಗಳ ಇದ್ದಂತಹ 56 ಕೋಟಿ 92 ಲಕ್ಷ ರೂಪಾಯಿಗಳ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ವಸತಿ ಶಾಲೆಗಳ ಹಾಗೂ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಬೆಡ್ ಶೀಟ್ ಸೊಳ್ಳೆ ಪರದೆಗಳು ಟ್ರ್ಯಾಕ್ ಸೂಟ್ ಮತ್ತು ನೈಟ್ ಡ್ರೆಸ್ ಗಳ ಸಾಮಗ್ರಿಗಳನ್ನು ಪೂರೈಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.