10:04 AM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್ ಆಗ್ರಹ

15/09/2021, 21:27

ಮಂಗಳೂರು(reporterkarnataka.com):ರಾಜ್ಯದಲ್ಲಿ ದೇಗುಲಗಳನ್ನು ಕೆಡಹುವ ವಿಷಯ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ಮಾಜಿ ಸಚಿವ ಯು.ಟಿ.ಖಾದರ್ ಎಂಟ್ರಿ ಕೊಟ್ಟಿದ್ದಾರೆ. ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನ ಕೆಡವಿದ್ದಾರೆ ಎಂದು ಖಾದರ್ ಟೀಕಿಸಿದ್ದಾರೆ.

ಮಾಧ್ಯಮ ಜತೆ ಈ ಕುರಿತು ಮಾತನಾಡಿದ ಅವರು, ಬಿಜೆಪಿ ಸರಕಾರ ಸಂಸ್ಕೃತಿ ಕೆಡವುತ್ತೆ ಎನ್ನುವುದು ಮತ್ತೆ ಸಾಬೀತಾಗಿದೆ. ದೇವಸ್ಥಾನ ಕೆಡವಿದ ಬಗ್ಗೆ ಸರ್ಕಾರ ಯಾರನ್ನು ಜವಾಬ್ದಾರಿ ಮಾಡುತ್ತೆ. ದೇವಸ್ಥಾನದ ಇತಿಹಾಸ, ಅಲ್ಲಿನ ಶಿಲ್ಪಕಲೆ ಎಲ್ಲವೂ ಇವರಿಗೆ ಅರ್ಥವಾಗಿಲ್ವಾ..? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಅಷ್ಟೇ ಅಲ್ಲ, ಇದು ಇಡೀ ದೇಶಕ್ಕೆ ದೊಡ್ಡ ಕಪ್ಪುಚುಕ್ಕೆ. ಇದರ ನೈತಿಕ ಹೊಣೆ ಹೊತ್ತು ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ. ಸರ್ಕಾರ ಆದೇಶ ಕೊಡುವಾಗ ಏಕೆ ಯೋಚನೆ ಮಾಡಿಲ್ಲ..? ಇದನ್ನು ಕೂತು ಚರ್ಚಿಸಿದ್ರೆ ಈ ಸಮಸ್ಯೆಗೆ ಪರಿಹಾರ ಸಿಗ್ತಾ ಇರ್ಲಿಲ್ವಾ..? ದೊಡ್ಡ ದೊಡ್ಡವರಿಗೆ ಬಿಜೆಪಿ ಸರ್ಕಾರ ಅಕ್ರಮ ಜಾಗ ಸಕ್ರಮ ಮಾಡಿ ಕೊಟ್ಟಿಲ್ವಾ..? ಹೀಗಿರುವಾಗ ದೇವಸ್ಥಾನದ ಜಾಗ ಸಕ್ರಮ ಮಾಡಲು ಸರ್ಕಾರಕ್ಕೆ ಏನು ತೊಂದರೆ…? ಇದು ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತೆ ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು