ಇತ್ತೀಚಿನ ಸುದ್ದಿ
ದೇಹದ ಫಿಟ್ನೆಸ್ ನಿಯಮಿತವಾಗಿ ಕಾಪಾಡಿಕೊಳ್ಳಿ :ವಿವೇಕ ಸಪ್ತಾಹದಲ್ಲಿ ವಿದ್ಯಾರ್ಥಿಗಳಿಗೆ ಸಲಹೆ
16/01/2022, 23:08
ಮಂಗಳೂರು(reporterkarnataka.com):
ಮಂಗಳೂರು ವಿಶ್ವ ವಿದ್ಯಾನಿಲಯ, ಯುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗೋಕರ್ಣನಾಥೇಶ್ವರ ಕಾಲೇಜಿನ ರಾ.ಸೇ.ಯೋ ಸಂಯುಕ್ತ ಆಶ್ರಯದಲ್ಲಿ ವಿವೇಕ ಸಪ್ತಾಹದ ಪ್ರಯುಕ್ತ ದೈಹಿಕ ಸಾಮರ್ಥ್ಯದ ಕುರಿತು ಅರಿವು ಕಾರ್ಯಾಕ್ರಮ ಇತ್ತೀಚೆಗೆ ಗೋಕರ್ಣನಾಥೇಶ್ವರ ಕಾಲೇಜಿನ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಿವ ಭಕ್ತಿ ಯೋಗ ಸಂಘದ ಕಾರ್ಯದರ್ಶಿ ವಸಂತ ಕಾರಂದೂರು ನೆರವೇರಿಸಿ ಅವರು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ವಿಶ್ವವಿದ್ಯಾನಿಲಯ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಉಪ ನಿರ್ದೇಶಕ ಡಾ. ಕೇಶವಮೂರ್ತಿ ಮಾತನಾಡಿ,
ನಿಮ್ಮ ದೇಹದ ಫಿಟ್ನೆಸನ್ನು ನಿಯಮಿತವಾಗಿ ನಿಯಂತ್ರಿಸಿಕೊಳ್ಳಿ, ವಿದ್ಯಾರ್ಥಿಗಳು ಪಾಠ ಪ್ರವಚನಕ್ಕೆ ಮಾತ್ರ ಸೀಮಿತರಾಗಿದ್ದಾರೆ. ಕ್ರೀಡೆಯ ಬಗ್ಗೆ ಗಮನಹರಿಸುವುದಿಲ್ಲ. ಪೋಷಕರು ಮಕ್ಕಳು ದಷ್ಟಪುಷ್ಟವಾಗಿ ಬೆಳೆಯಲಿ ಎಂದು ವಿಪರೀತವಾಗಿ ಆಹಾರವನ್ನು ನೀಡುತ್ತಾರೆ. ಆದರೆ ಇದರಿಂದಾಗಿ ಮಕ್ಕಳ ಆರೋಗ್ಯದ ಸಮತೋಲನ ಮಟ್ಟ ಏರುಪೇರಾಗುತ್ತದೆ ಎಂದರು.
ಕಾರ್ಯಕ್ರಮ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ಬಲವಾಗಿ ನಿಂತಿರುವುದೇ ಸ್ವಾಮಿ ವಿವೇಕಾನಂದರ ಮತ್ತು ಗಾಂಧೀಜಿಯ ತತ್ವಗಳ ಆಧಾರದಲ್ಲಿ. ದೇಶದ ಯುವಕರನ್ನು ಬಡಿದೆಬ್ಬಿಸಿ, ದೇಶದ ಉದ್ದಗಲಕ್ಕೂ ಸಂಚರಿಸಿ ರಾಷ್ಟ್ರೀಯತೆಯನ್ನು ಬಿಂಬಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಪ್ರತಿಯೊಂದು ಕಾರ್ಯಕ್ರಮವು ರಾಷ್ಟ್ರೀಯತೆಯನ್ನು ಬಿಂಬಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಆಯೋಜಕರಾದ ದ.ಕ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿ ಸೋಜ ಮಾತನಾಡಿ, ಸ್ವಾಮಿ ವಿವೇಕಾನಂದರ ಗುಣಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಸುಜಯ ಸುವರ್ಣ ವಹಿಸಿದ್ದರು.
ಕಾಲೇಜಿನ ರಾ. ಸೇ.ಯೋ. ಯೋಜನಾಧಿಕಾರಿ ಯತೀನ್ ಹಾಗೂ ಕಾಲೇಜಿನ ಆಡಳಿತ ಮಂಡಳಿ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.