8:35 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದೇಹದ ಫಿಟ್ನೆಸ್ ನಿಯಮಿತವಾಗಿ ಕಾಪಾಡಿಕೊಳ್ಳಿ :ವಿವೇಕ ಸಪ್ತಾಹದಲ್ಲಿ ವಿದ್ಯಾರ್ಥಿಗಳಿಗೆ ಸಲಹೆ

16/01/2022, 23:08

ಮಂಗಳೂರು(reporterkarnataka.com):
ಮಂಗಳೂರು ವಿಶ್ವ ವಿದ್ಯಾನಿಲಯ, ಯುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗೋಕರ್ಣನಾಥೇಶ್ವರ  ಕಾಲೇಜಿನ ರಾ.ಸೇ.ಯೋ ಸಂಯುಕ್ತ ಆಶ್ರಯದಲ್ಲಿ  ವಿವೇಕ  ಸಪ್ತಾಹದ ಪ್ರಯುಕ್ತ ದೈಹಿಕ ಸಾಮರ್ಥ್ಯದ ಕುರಿತು ಅರಿವು ಕಾರ್ಯಾಕ್ರಮ ಇತ್ತೀಚೆಗೆ ಗೋಕರ್ಣನಾಥೇಶ್ವರ ಕಾಲೇಜಿನ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಿವ ಭಕ್ತಿ ಯೋಗ ಸಂಘದ ಕಾರ್ಯದರ್ಶಿ ವಸಂತ ಕಾರಂದೂರು  ನೆರವೇರಿಸಿ ಅವರು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ವಿಶ್ವವಿದ್ಯಾನಿಲಯ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಉಪ ನಿರ್ದೇಶಕ ಡಾ. ಕೇಶವಮೂರ್ತಿ ಮಾತನಾಡಿ,
ನಿಮ್ಮ ದೇಹದ ಫಿಟ್ನೆಸನ್ನು ನಿಯಮಿತವಾಗಿ ನಿಯಂತ್ರಿಸಿಕೊಳ್ಳಿ, ವಿದ್ಯಾರ್ಥಿಗಳು ಪಾಠ ಪ್ರವಚನಕ್ಕೆ ಮಾತ್ರ ಸೀಮಿತರಾಗಿದ್ದಾರೆ. ಕ್ರೀಡೆಯ ಬಗ್ಗೆ ಗಮನಹರಿಸುವುದಿಲ್ಲ. ಪೋಷಕರು ಮಕ್ಕಳು ದಷ್ಟಪುಷ್ಟವಾಗಿ ಬೆಳೆಯಲಿ ಎಂದು ವಿಪರೀತವಾಗಿ ಆಹಾರವನ್ನು ನೀಡುತ್ತಾರೆ.  ಆದರೆ ಇದರಿಂದಾಗಿ ಮಕ್ಕಳ ಆರೋಗ್ಯದ ಸಮತೋಲನ ಮಟ್ಟ ಏರುಪೇರಾಗುತ್ತದೆ ಎಂದರು.

ಕಾರ್ಯಕ್ರಮ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ಬಲವಾಗಿ ನಿಂತಿರುವುದೇ ಸ್ವಾಮಿ ವಿವೇಕಾನಂದರ ಮತ್ತು ಗಾಂಧೀಜಿಯ ತತ್ವಗಳ ಆಧಾರದಲ್ಲಿ. ದೇಶದ ಯುವಕರನ್ನು ಬಡಿದೆಬ್ಬಿಸಿ, ದೇಶದ ಉದ್ದಗಲಕ್ಕೂ ಸಂಚರಿಸಿ ರಾಷ್ಟ್ರೀಯತೆಯನ್ನು ಬಿಂಬಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಪ್ರತಿಯೊಂದು ಕಾರ್ಯಕ್ರಮವು ರಾಷ್ಟ್ರೀಯತೆಯನ್ನು ಬಿಂಬಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಆಯೋಜಕರಾದ ದ.ಕ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿ ಸೋಜ ಮಾತನಾಡಿ, ಸ್ವಾಮಿ ವಿವೇಕಾನಂದರ ಗುಣಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಸುಜಯ ಸುವರ್ಣ ವಹಿಸಿದ್ದರು.


ಕಾಲೇಜಿನ ರಾ. ಸೇ.ಯೋ. ಯೋಜನಾಧಿಕಾರಿ ಯತೀನ್ ಹಾಗೂ ಕಾಲೇಜಿನ ಆಡಳಿತ ಮಂಡಳಿ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು