ಇತ್ತೀಚಿನ ಸುದ್ದಿ
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಗೆ ಬಿಗ್ ರಿಲೀಫ್: ಸುಪ್ರೀಂಕೋರ್ಟ್ ನಿಂದ ಮಧ್ಯಂತರ ಜಾಮೀನು
10/05/2024, 21:22

ದೆಹಲಿ(reporterkarnataka.com): ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದರೊಂದಿಗೆ ಕೇಜ್ರಿವಾಲ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಾಗೆ ಆಗಿದೆ.
ಕೇಜ್ರಿವಾಲ್ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಜೂನ್ 2ರಂದು ಶರಣಾಗುವಂತೆ ತಿಳಿಸಿದೆ.