11:19 PM Saturday21 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ದೆಹಲಿ ಗಣರಾಜ್ಯೋತ್ಸವ ಫೆರೇಡ್ ಗೆ ದಂತ ವೈದ್ಯೆ ಪುತ್ತೂರಿನ ಡಾ. ವಜೀದಾಬಾನು ಆಯ್ಕೆ

29/12/2022, 10:19

ಪುತ್ತೂರು(reporterkarnataka.com);
ದೆಹಲಿಯಲ್ಲಿ ನಡೆಯಲಿರುವ 2023ನೇ ಸಾಲಿನ ಭಾರತ ಗಣರಾಜ್ಯೋತ್ಸವ ಫೆರೇಡ್‌ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜೀದಾಬಾನು ಆಯ್ಕೆಯಾಗಿದ್ದಾರೆ.

ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಡಾ. ವಜೀದಾಬಾನು ಒಬ್ಬರಾಗಿದ್ದಾರೆ.

ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು ಪುತ್ತೂರಿನ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿಯ ಪುತ್ರಿ. ಪ್ರಸ್ತುತ ಎ. ಜೆ. ದಂತ ವೈದ್ಯಕೀಯ ಕಾಲೇಜಿನಿಂದ ದಂತ ವೈದ್ಯಕೀಯ ಪದವಿ ಪಡೆದಿರುತ್ತಾರೆ.
ಇತ್ತೀಚೆಗೆ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಈ ಸಾಲಿನಲ್ಲಿ ಆರು ವಿಷಯಗಳಲ್ಲಿ ರ‌್ಯಾಂಕ್ ಪಡೆದಿರುತ್ತಾರೆ. ಪುತ್ತೂರು ಕಮ್ಯೂನಿಟಿ ಸೆಂಟರ್‌ನ ಕೌನ್ಸಿಲರ್ ಆಗಿರುವ ಅವರು ಹಲವಾರು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಪ್ರೇರಣೆ ನೀಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿದ್ದಾರೆ ಎಂದು ಪುತ್ತೂರು ಕಮ್ಯೂನಿಟಿ ಸೆಂಟರ್‌ನ ಪ್ರಧಾನ ಕಾರ್ಯದರ್ಶಿ ಹನೀಫ್ ಪುತ್ತೂರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು