1:55 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ದೆಹಲಿ: ಕುಡಿತದ ಮತ್ತಿನಲ್ಲಿ ವಿದ್ಯಾರ್ಥಿನಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ ಸೆಕ್ಯೂರಿಟಿ ಗಾರ್ಡ್; ದೃಶ್ಯ ಸಿಸಿಯಲ್ಲಿ ಸೆರೆ

17/08/2022, 23:39

ಹೊಸದಿಲ್ಲಿ(reporterkarnataka.com): ದಿಲ್ಲಿಯ ಕರೋಲ್‌ ಭಾಗ್ ಪ್ರದೇಶದ ಖಾಸಗಿ ಹಾಸ್ಟೆಲ್‌ನ ಭದ್ರತೆಗೆ ನಿಯೋಜಿಸಿದ್ದ ಸೆಕ್ಯೂರಿಟಿ ಗಾರ್ಡ್‌ ಓರ್ವ ಕುಡಿದ ಮತ್ತಿನಲ್ಲಿ ವಿದ್ಯಾರ್ಥಿನಿಯರನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಹಲ್ಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ, ಇದರ ವಿಡಿಯೋ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. 

ಘಟನೆಗೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. 

ವಿಡಿಯೋದಲ್ಲಿ ಕಾಣಿಸುವಂತೆ ಕಾಲೇಜು ವಿದ್ಯಾರ್ಥಿನಿಯರು ಹಾಸ್ಟೆಲ್‌ನ ಕಾರಿಡಾರ್‌ನಲ್ಲಿ ಸೇರಿದ್ದು, ಈ ವೇಳೆ ಕುಡಿದ ಮತ್ತಿನಲ್ಲಿದ ಸೆಕ್ಯೂರಿಟಿ ಗಾರ್ಡ್ ಯುವತಿಯರನ್ನು ಎಳೆದಾಡಿ ಅವರನ್ನು ತಬ್ಬಿಕೊಳ್ಳಲು ಯತ್ನಿಸಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿಯ ಕರೋಲ್‌ ಭಾಗ್ ಪ್ರದೇಶದ ಗೋಲ್ಡ್‌ ವಿಲ್ಲಾ ಪಿಜಿಯಲ್ಲಿ ಈ ಘಟನೆ ನಡೆದಿದೆ. 

ಘಟನೆಗೆ ಸಂಬಂಧಿಸಿದಂತೆ ಕರೋಲ್ ಭಾಗ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಆದರೆ ದೂರುದಾರರು ಹೇಳಿಕೆ ನೀಡಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು