ಇತ್ತೀಚಿನ ಸುದ್ದಿ
ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ: ಎಎಪಿಯಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ
27/02/2023, 13:24
ಮೃದುಲಾ ನಾಯರ್ ಹೊಸದಿಲ್ಲಿ
info.reporterkarnataka@gmail.ಕಾಂ
ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನವನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ(ಎಎಪಿ) ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಪ್ರಾರಂಭಿಸಿದೆ.
ದೀನ್ ದಯಾಳ್ ಉಪಾಧ್ಯಾಯ (ಡಿಡಿಯು) ಮಾರ್ಗದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಎಎಪಿ ಪ್ರತಿಭಟನೆಗೆ ಕರೆ ನೀಡಿದ್ದರಿಂದ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಗರದ ಮಧ್ಯ ಭಾಗದಲ್ಲಿ ಹಗಲಿನಲ್ಲಿ ಸಂಚಾರಕ್ಕೂ ತೊಂದರೆಯಾಗುವ ಸಾಧ್ಯತೆ ಇದೆ.
ಆಪಾದಿತ ಮದ್ಯದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ 8 ತಾಸು ವಿಚಾರಣೆ ನಡೆಸಿದ ಬಳಿಕ ಬಂಧಿಸಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ , ಹೆಚ್ಚಿನ ಸಿಬಿಐ ಅಧಿಕಾರಿಗಳು ಮನೀಶ್ ಬಂಧನವನ್ನು ವಿರೋಧಿಸಿದ್ದಾರೆ ಎಂದು ನನಗೆ ತಿಳಿಸಲಾಗಿದೆ. ಅವರೆಲ್ಲರಿಗೂ ಅವರ ಬಗ್ಗೆ ಅಪಾರ ಗೌರವವಿದೆ ಮತ್ತು ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲ. ಆದರೆ ಆತನನ್ನು ಬಂಧಿಸುವ ರಾಜಕೀಯ ಒತ್ತಡ ಎಷ್ಟಿತ್ತೆಂದರೆ ಅವರು ತಮ್ಮ ರಾಜಕೀಯ ಯಜಮಾನರಿಗೆ ವಿಧೇಯರಾಗಬೇಕಾಯಿತು ಎಂದು ಹೇಳಿದ್ದಾರೆ.
ಕಳೆದ ವರ್ಷ ಜುಲೈನಿಂದ, ‘ಅಬಕಾರಿ ನೀತಿ ಹಗರಣ’ದಲ್ಲಿ ಸಿಬಿಐ ತನಿಖೆಗೆ ಎಲ್-ಜಿ ವಿನಯ್ ಕುಮಾರ್ ಸಕ್ಸೇನಾ ಅವರ ಶಿಫಾರಸಿನ ಆಧಾರದ ಮೇಲೆ ಬಿಜೆಪಿಯು ದೆಹಲಿ ಸರ್ಕಾರದ ಮೇಲೆ ಆಪಾದಿತ ಭ್ರಷ್ಟಾಚಾರ ಆರೋಪಗಳ ಮೇಲೆ ಬಂಧನ ನಡೆಸಿದೆ.














