6:42 AM Sunday25 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ದೆಹಲಿ ವಿಧಾನಸಭೆ ಫಲಿತಾಂಶ ತುಷ್ಟೀಕರಣ ರಾಜಕೀಯದ ತಿರಸ್ಕಾರ: ಕೇಂದ್ರ ಸಚಿವ ಕುಮಾರಸ್ವಾಮಿ

09/02/2025, 09:40

ನವದೆಹಲಿ(reporterkarnataka.com): ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿದ್ದಾರೆ.
ಪ್ರಧಾನಿಗಳಾದ ಮೋದಿ ಅವರು, ಗೃಹ ಸಚಿವರಾದ ಅಮಿತ್ ಶಾ ಅವರು ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆಪಿ ನಡ್ಡಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ದಿಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು