9:42 AM Wednesday7 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ದೆಹಲಿ ವಿಧಾನಸಭೆ ಫಲಿತಾಂಶ ತುಷ್ಟೀಕರಣ ರಾಜಕೀಯದ ತಿರಸ್ಕಾರ: ಕೇಂದ್ರ ಸಚಿವ ಕುಮಾರಸ್ವಾಮಿ

09/02/2025, 09:40

ನವದೆಹಲಿ(reporterkarnataka.com): ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿದ್ದಾರೆ.
ಪ್ರಧಾನಿಗಳಾದ ಮೋದಿ ಅವರು, ಗೃಹ ಸಚಿವರಾದ ಅಮಿತ್ ಶಾ ಅವರು ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆಪಿ ನಡ್ಡಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ದಿಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು