12:56 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ದಿಲ್ಲಿಯಲ್ಲಿ ಅಪಾಯದ ಮಟ್ಟಕ್ಕೇರಿದ ವಾಯು ಮಾಲಿನ್ಯ; ಹಲವರಲ್ಲಿ ಗಂಟಲು, ಕಣ್ಣು ತುರಿಕೆ

05/11/2021, 19:41

ಹೊಸದಿಲ್ಲಿ(reporterkarnataka.com): 

ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟವು ಇಂದು ಬೆಳಗ್ಗೆ ಅಪಾಯಕಾರಿ ಹಂತಕ್ಕೆ ತಲುಪಿತ್ತು. ಜನಪಥ್‌ನಲ್ಲಿ ಇಂದು ಬೆಳಿಗ್ಗೆ ಮಾಲಿನ್ಯ ಮಾಪಕ 2.5 ಸಾಂದ್ರತೆಯು 655.07 ರಷ್ಟಿತ್ತು.

ದೆಹಲಿಯ ಆಕಾಶವನ್ನು ದಟ್ಟವಾದ ಹೊಗೆಯ ಹೊದಿಕೆಯು ಆವರಿಸಿದೆ , ಹಲವರು ಗಂಟಲಿನ ತುರಿಕೆ ಮತ್ತು ಕಣ್ಣಿನಲ್ಲಿ ನೀರು ತುಂಬಿಕೊಂಡಿದೆ ಎಂದು ದೂರಿದ್ದಾರೆ.

ದೆಹಲಿಯ ಮಂಜಿನ ಪರಿಸ್ಥಿತಿಗಳು ಶುಕ್ರವಾರ ಬೆಳಿಗ್ಗೆ ತೀವ್ರಗೊಂಡಿದ್ದು, ಸಫ್ದರ್‌ಜಂಗ್ ಮತ್ತು ಪಾಲಂ ವಿಮಾನ ನಿಲ್ದಾಣಗಳಲ್ಲಿ 200 ಮೀ ನಿಂದ 500 ಮೀ ವ್ಯಾಪ್ತಿಯವರೆಗೆ ಗೋಚರತೆ ಕುಸಿದಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ವಿಜ್ಞಾನಿಗಳು ತಿಳಿಸಿದ್ದಾರೆ.

ದೆಹಲಿ, ಪಂಜಾಬ್‌ ಸೇರಿದಂತೆ ಪಶ್ಚಿಮ ಬಂಗಾಳ  ರಾಜಸ್ತಾನ , ಚತ್ತೀಸಘಡ ಬಿಹಾರ ರಾಜ್ಯಗಳಲ್ಲಿ ಪಟಾಕಿ ನಿಷೇಧಿಸಿ ವಿಶೇಷ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಸೇರಿದಂತೆ ದೇಶದಲ್ಲಿ ಬಹುತೇಕ ರಾಜ್ಯಗಳಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ. ಇತರೆ ಪಟಾಕಿಗೆ ಅವಕಾಶವಿಲ್ಲ. ಈ ನಿರ್ಧಾರ ಪರ ವಿರೋಧಕ್ಕೆ ಕಾರಣಾಗಿದೆ. ಹಿಂದೂಗಳ ಹಬ್ಬಕ್ಕೆ ಮಾತ್ರ ಪಟಾಕಿ ನಿಷೇಧ ಯಾಕೆ ಅನ್ನೋ ವಾದವೂ ಹೆಚ್ಚಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು