5:33 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ದೆಹಲಿ: ಸಂಸದ ಸಾಗರ್ ಖಂಡ್ರೆ ಜತೆ ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಅರಣ್ಯ ಸಚಿವ ಈಶ್ವರ್ ಖಂಡ್ರೆ

28/03/2025, 20:08

ನವದೆಹಲಿ(reporterkarnataka.com): ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿದರು.

ಅರಣ್ಯ ಇಲಾಖೆಯ ಅಭಿವೃದ್ಧಿ ಯೋಜನೆಗಳು, ಪ್ರಕೃತಿ ಪರಿಸರ ಉಳಿಸಲು ಆರಂಭಿಸಿರುವ ಕಾರ್ಯಕ್ರಮಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಗುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಖಂಡ್ರೆ ಅವರು ಖರ್ಗೆ ಜತೆ ಚರ್ಚಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಕೂಡ ಖಂಡ್ರೆ ಭೇಟಿಯಾದರು. ಈ ಸಂದರ್ಭದಲ್ಲಿ ಬೀದರ್ ಸಂಸದ ಸಾಗರ್ ಖಂಡ್ರೆ ಉಪಸ್ಥಿತರಿದ್ದರು. ನಂತರ ಮಾಧ್ಯಮ ಜತೆ ಮಾತನಾಡಿದ ಈಶ್ವರ್ ಖಂಡ್ರೆ ಅವರು, ರಾಜ್ಯದ ಮತ್ತು ಪಕ್ಷದ ವಿಧ್ಯಮಾನಗಳ ಬಗ್ಗೆ ಚರ್ಚಿಸಿದ್ದಾಗಿ ತಿಳಿಸಿರು.
ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೇತೃತ್ವದಲ್ಲಿ ಉತ್ತಮ ಆಡಳಿತ ನೀಡುತ್ತಿದೆ ಎಂದು ಹೇಳಿದರು.
ರಾಷ್ಟ್ರೀಯ ನಾಯಕರು, ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗಲು ಸಂಘಟಿತ ಪ್ರಯತ್ನ ಮಾಡುವಂತೆ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಮಾಡಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಜನತೆಗೆ ಮನವರಿಕೆ ಮಾಡಿಸಲು ಸೂಚಿಸಿದ್ದಾರೆ. ಈ ಕಾರ್ಯವನ್ನು ಮಾಡಲಾಗುವುದು ಎಂದರು.
*ಸ್ಮಾರ್ಟ್ ಮೀಟರ್: ಬಿಜೆಪಿ ವಿರುದ್ಧ ಖಂಡ್ರೆ ಆಕ್ರೋಶ:*
ಸ್ಮಾರ್ಟ್ ಮೀಟರ್ ಖರೀದಿಯನ್ನು ಟೆಂಡರ್ ಪ್ರಕ್ರಿಯೆ ಮೂಲಕ ನಡೆಸಲಾಗಿದ್ದು, ಈ ಬಗ್ಗೆ ಇಂಧನ ಸಚಿವರು ಸದನದಲ್ಲೇ ಸ್ಪಷ್ಟೀಕರಣ ನೀಡಿದ್ದಾರೆ. ಬಿಜೆಪಿಯವರಿಗೆ ಯಾವುದೇ ವಿಷಯ ಇಲ್ಲ. ಹೀಗಾಗಿ ಅಪಪ್ರಚಾರದಲ್ಲಿ ತೊಡಗಿದೆ ಎಂದು ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು