7:37 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ

19/08/2026, 18:55

ಉಡುಪಿ(reporterkarnataka.com): ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಂತೆ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠವನ್ನು ಕರಾವಳಿ ಭಾಗದಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಸಂಘಟಿತ ಹೋರಾಟ ರೂಪಿಸುವ ನಿಟ್ಟಿನಲ್ಲಿ ಯು-ಆಯಕ್ಟ್ ಹಾಗೂ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ವತಿಯಿಂದ ಆಗಸ್ಟ್ 22ರಂದು ಉಡುಪಿಯಲ್ಲಿ ಸಭೆ ನಡೆಯಲಿದೆ ಎಂದು ಸಮಿತಿಯ ಸ್ಥಾಪಕ ಹಾಗೂ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಎಂದರು.

ಕರಾವಳಿಯಿಂದ ಬೆಂಗಳೂರಿನ ಹೈಕೋರ್ಟ್‌ಗೆ ಪ್ರಕರಣಗಳ ವಿಚಾರಣೆಗೆ ತೆರಳಲು 900ರಿಂದ 1,000 ಕಿ.ಮೀ.ಗೂ ಅಧಿಕ ದೂರ ಪ್ರಯಾಣಿಸಬೇಕಾಗಿದ್ದು, ಮಳೆಗಾಲದಲ್ಲಿ ಸಾರ್ವಜನಿಕರು, ಮಹಿಳೆಯರು ಹಾಗೂ ಕಕ್ಷಿದಾರರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಕರಾವಳಿಯಲ್ಲಿ ಪೀಠ ಸ್ಥಾಪನೆಯಾದರೆ ಕಡಿಮೆ ವೆಚ್ಚದಲ್ಲಿ ತ್ವರಿತ ನ್ಯಾಯ ದೊರೆಯಲಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ವಕೀಲರು, ಪತ್ರಕರ್ತರು, ಸಾಮಾಜಿಕ ಹಾಗೂ ಉದ್ಯಮ ಸಂಘಟನೆಗಳು, ವಿದ್ಯಾರ್ಥಿ ಮತ್ತು ಕಾರ್ಮಿಕ ಸಂಘಟನೆಗಳು, ಮಾಜಿ ಸೈನಿಕರು, ಆಟೋ ಚಾಲಕರು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಹೋರಾಟವನ್ನು ವಕೀಲರಿಗೆ ಸೀಮಿತಗೊಳಿಸದೆ ಇಡೀ ಕರಾವಳಿ ಜನತೆಯ ಧ್ವನಿಯಾಗಿಸುವ ಉದ್ದೇಶವಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪೌರ್ಣಾಮಿ ಪ್ರೇಮ್, ವಿಜಯ್ ಡಿಸೋಜಾ,ಮಾಧವ ಕಾಮತ್,ಸರಿತಾ ಹಾಗೂ ಸುರೇಶ್ ಕಾಮತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು