10:15 PM Wednesday23 - September 2026
ಬ್ರೇಕಿಂಗ್ ನ್ಯೂಸ್
ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ…

ಇತ್ತೀಚಿನ ಸುದ್ದಿ

ಮಂಗಳೂರಿನ‌ ರಾಜಕಾಲುವೆ, ಚರಂಡಿಗಳ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ

19/02/2026, 20:43

ಮಂಗಳೂರು(reporterkarnata.com): ಮುಂಬರುವ ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಕೃತಕ ನೆರೆಯಿಂದ ಹಲವಾರು ಪ್ರದೇಶಗಳು ಜಲಾವೃತವಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದನ್ನು ಗಮನಿಸಲಾಗಿದ್ದು, ಈ ನಿಟ್ಟಿನಲ್ಲಿ ಮುಂಗಾರು ಮಳೆಯಲ್ಲಿ ಉಂಟಾಗಬಹುದಾದ ಕೃತಕ ನೆರೆಯನ್ನು ತಡೆಗಟ್ಟುವ ಉದ್ದೇಶದಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಹಾನಗರಪಾಲಿಕೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಗುರುವಾರ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮುಂಜಾಗ್ರತಾ ಕ್ರಮವಾಗಿ ನಗರದ ರಾಜಕಾಲುವೆ / ಬೃಹತ್ ಚರಂಡಿಗಳ ಹೂಳೆತ್ತುವ ಕಾಮಗಾರಿಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ಶೀಘ್ರವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಮಂಗಳೂರು ಮಹಾನಗರಪಾಲಿಕೆಯ ಮಳೆಗಾಲದ ಪೂರ್ವ ಸಿದ್ಧತೆ ಭಾಗವಾಗಿ ಮಹಾನಗರಪಾಲಿಕೆಯ ಎಲ್ಲಾ ವಾರ್ಡ್‍ಗಳಲ್ಲಿ ಬೃಹತ್ ರಾಜಕಾಲುವೆ ಸುಮಾರು 50 ಕಿಲೋ ಮೀಟರ್ ಮತ್ತು ರಾಜಕಾಲುವೆಗೆ ಕೂಡುವ ಮುಖ್ಯ ಚರಂಡಿಯನ್ನು ಒಳಗೊಂಡು ಹೂಳೆತ್ತುವ ಕಾಮಗಾರಿಯನ್ನು ಮಾರ್ಚ್ ತಿಂಗಳಿಂದ ಪ್ರಾರಂಭಿಸಲು ಉದ್ದೇಶಿಸಿದ್ದು ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ತಿಳಿಸಿದರು.
ಕಾಮಗಾರಿಯನ್ನು ಉತ್ತಮ ಹಾಗೂ ವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸುವ ಬಗ್ಗೆ ಸಾರ್ವಜನಿಕರು/ಸಂಘ ಸಂಸ್ಥೆಗಳು ಸಲಹೆಗಳನ್ನು ನೀಡಬಹುದಾಗಿದ್ದು, ಹೂಳೆತ್ತುವ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಸ್ವಾಗತಿಸುತ್ತದೆ.ಪಾಲಿಕೆಯ ಸಹಾಯವಾಣಿ ಸಂಖ್ಯೆ -0824-2220306/ 2220319 ಗೆ ಅಥವಾ ವಾಟ್ಸ್‍ಆ್ಯಪ್ ಸಂಖ್ಯೆ 9449007722 ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು