8:22 AM Tuesday30 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಉಸ್ತುವಾರಿ ಸಚಿವರ ವಿರುದ್ದ ಅವಹೇಳನಕಾರಿ ಪೋಸ್ಟ್: ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ಮೇಲೆ ಎಫ್ ಐಆರ್

18/05/2025, 22:38

ಮಂಗಳೂರು(reporterkarnataka.com): ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಬಗ್ಗೆ ಶ್ವೇತಾ ಪೂಜಾರಿ ತನ್ನ ಫೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು.
ಸುಹಾಸ್ ಶೆಟ್ಟಿ ಕೊಲೆ ಘಟನೆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಬುರ್ಖಾಧಾರಿ ಮಹಿಳೆಯರನ್ನು ನಮಗೆ ತಂದೊಪ್ಪಿಸಿ, ಅವರನ್ನು ಯುವ ಮೋರ್ಚಾದ ಮಹಿಳೆಯರು ನೋಡಿಕೊಳ್ಳುತ್ತೇವೆಂದು ಪ್ರಚೋದನಕಾರಿ ಪೋಸ್ಟ್ ಮಾಡಿದ್ದರು. ಇದಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೋಟೋ ತೋರಿಸಿ ಗೂಂಡಾ ಮುಂತಾದ ಅವಾಚ್ಯ ಪದಗಳಿಂದ ನಿಂದಿಸಿ ಪೋಸ್ಟ್ ಮಾಡಿದ್ದು ಈ ಬಗ್ಗೆ ಸುರತ್ಕಲ್ ಕ್ಷೇತ್ರದ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಶಾಂತಾ ರಾವ್ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ಇದರಂತೆ, ಸುರತ್ಕಲ್ ಠಾಣೆಯಲ್ಲಿ ಶ್ವೇತಾ ಪೂಜಾರಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣವನ್ನು ಸಿಇಎನ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು