11:19 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

14/01/2026, 23:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗಿನ ಹೆಣ್ಣುಮಕ್ಕಳನ್ನು ಆಪ್ ಮೂಲಕ ಮಾಧ್ಯಮದಲ್ಲಿ ಹೀನಾಯವಾಗಿ ಅವಮಾನಿಸಿ,15 ರೂಪಾಯಿ ಕೊಟ್ಟರೆ ಕೊಡಗಿನಲ್ಲಿ ಹೆಣ್ಣುಮಕ್ಕಳು ಸಿಗುತ್ತಾರೆ” ಎಂಬ ಅಸಭ್ಯ ಹಾಗೂ ನಿಂದನಾತ್ಮಕ ಹೇಳಿಕೆ ಮಾಡಿದ ವ್ಯಕ್ತಿಗಳ ವಿರುದ್ಧ ಕೊಡಗು ಅಭಿವೃದ್ಧಿ ಸಮಿತಿ ಜಿಲ್ಲಾಧ್ಯಕ್ಷದ ಪ್ರಸನ್ನ ಭಟ್ ದೂರು ದಾಖಲಿಸಿದ್ದಾರೆ.
ಈ ಸಂಬಂಧ, ನಿನ್ನೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಂದು ಮಡಿಕೇರಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಲಾಗಿದೆ.
ಕೊಡಗು ಅಭಿವೃದ್ಧಿ ಸಮಿತಿಯ ಜಿಲ್ಲಾಧ್ಯಕ್ಷರಾದ ಪ್ರಸನ್ನ ಭಟ್ ಅವರ ನೇತೃತ್ವದಲ್ಲಿ ಸಲ್ಲಿಸಲಾದ ದೂರಿನ ಮೇರೆಗೆ, ಐಟಿ ಆಕ್ಟ್ ಅಡಿ 2008 ( u/s 67) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.
ಸಾಮಾಜಿಕ ಜಾಲತಾಣದ ಮೂಲಕ ಕೊಡಗಿನ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿರುವ ಈ ಕೃತ್ಯವನ್ನು
ಕೊಡಗು ಅಭಿವೃದ್ಧಿ ಸಮಿತಿ ತೀವ್ರವಾಗಿ ಖಂಡಿಸಿದ್ದು,
ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು