ಇತ್ತೀಚಿನ ಸುದ್ದಿ
ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಎಐಸಿಸಿ ಅಧ್ಯಕ್ಷ ಖರ್ಗೆ ಕ್ಷಮೆ ಯಾಚನೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
26/10/2026, 18:00
ಬೆಂಗಳೂರು(reporterkarnataka.com): ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.


ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ, ಖರ್ಗೆ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಮಂತ್ರಿ ಹುದ್ದೆಯ ಘನತೆಯನ್ನು ಕಾಪಾಡಬೇಕು ಮತ್ತು ಈ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು. ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಪಕ್ಷದ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.












