11:13 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ದೇಶದ ನಾನಾ ಕಡೆಗಳಲ್ಲಿ ಕಂಪಿಸಿದ ಭೂಮಿ: ತಿರುಪತಿಯಲ್ಲಿ 3.6, ಲಡಾಖ್​​ನಲ್ಲಿ 4.3ರಷ್ಟು ತೀವ್ರತೆ ದಾಖಲು

03/04/2022, 18:18

ಹೊಸದಿಲ್ಲಿ(reporterkarnataka.com); ದೇಶದ ವಿವಿಧೆಡೆಗಳಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆ ವರೆಗೆ ಭೂಕಂಪಗಳು ಸಂಭವಿಸಿವೆ. 

ಆಂಧ್ರಪ್ರದೇಶದ ತಿರುಪತಿಯಲ್ಲಿ ಭಾನುವಾರ ಬೆಳಗಿನ ಜಾವ 1.10 ರ ಸುಮಾರಿಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ. ತಿರುಪತಿಯಿಂದ ಈಶಾನ್ಯಕ್ಕೆ 85 ಕಿಮೀ ದೂರದಲ್ಲಿ ಭೂಗರ್ಭದ 20 ಕಿಮೀ ಆಳದಲ್ಲಿ ಕಂಪನದ ಕೇಂದ್ರವಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದಿಂದ ಯಾವುದೇ ಹಾನಿಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಲಡಾಖ್​​, ಅಂಡಮಾನ್ ನಲ್ಲೂ ಭೂಕಂಪನ:

ಜಮ್ಮು-ಕಾಶ್ಮೀರದ ಲಡಾಖ್​​ನಲ್ಲಿರುವ ಅಲ್ಚಿ ಪ್ರದೇಶದ ಉತ್ತರದಲ್ಲಿ ಇಂದು ಬೆಳಗ್ಗೆ7.29ರ ಭೂಮಿ ಕಂಪಿಸಿದೆ. ಭೂಕಂಪದ ತೀವ್ರತೆ ರಿಕ್ಟರ್​ ಮಾಪಕದಲ್ಲಿ 4.3ರಷ್ಟು ದಾಖಲಾಗಿದೆ. ಶನಿವಾರ ರಾತ್ರಿ 2.5೦ರ ಸುಮಾರಿಗೆ ಅಂಡಮಾನ್​-ನಿಕೋಬಾರ್​ನ ದಿಗ್ಲಿಪುರ್​ ಪ್ರದೇಶದಲ್ಲಿಯೂ ಕಂಪನ ಸಂಭವಿದೆ. ಭೂಕಂಪನ ಪ್ರಮಾಣ ರಿಕ್ಟರ್ ಮಾಪಕದಲ್ಲಿ 4.4ರಷ್ಟು ದಾಖಲಾಗಿದೆ ಎಂದು ತಿಳಿದು ಬಂದಿದೆ. ಅದೃಷ್ಠವಶಾತ್‌ ಎಲ್ಲಿಯೂ ಯಾವುದೇ ಹಾನಿಗಳು ಸಂಭವಿಸಿದ ಕುರಿತು ವರದಿಯಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು