5:34 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ದೇಶ ಭಕ್ತಿ, ಸಮರ್ಪಣಾ ಮನೋಭಾವ ಸರ್ವರಲ್ಲಿಯೂ ಇರಬೇಕು: ಶಾಸಕ ಡಾ.ಭರತ್ ಶೆಟ್ಟಿ

18/10/2023, 16:16

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ದೇಶದ ಮೇಲೆ ಪ್ರೀತಿ, ಸಮರ್ಪಣಾ ಮನೋಭಾವ ದೇಶದ ಪ್ರತೀ ಪ್ರಜೆಯಲ್ಲಿಯೂ ಇದ್ದಾಗ ಎಂತಹ ಸಂಕಷ್ಟ ಬಂದರೂ ಎದುರಿಸಲು ಸಾಧ್ಯವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ವೀರ ಸ್ಮರಣೆಗಾಗಿ ಹಮ್ಮಿಕೊಂಡಿರುವ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮ ಐತಿಹಾಸಿಕ ನಡೆಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.




ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಕನ್ನಡ ಸಂಸ್ಕøತಿ ಇಲಾಖೆ, ಅಂಚೆ ಇಲಾಖೆ,ಲೀಡ್ ಬ್ಯಾಂಕ್, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯದ ಹಾಗೂ ನೆಹರು ಯುವ ಕೇಂದ್ರ ಮಂಗಳೂರು ಇದರ ಸಹಯೋಗದೊಂದಿಗೆ ಮೇರಿ ಮಾಟಿ ಮೇರಾ ದೇಶ್ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದ ಅಂಗವಾಗಿ ಅಮೃತ ಕಲಶ ಯಾತ್ರೆ ಯ ಸಮಾರೋಪ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಾತೃಭೂಮಿ ಎಂದು ಬಂದಾಗ ನಾವೆಲ್ಲಾ ಸಮರ್ಪಣಾ ಮನೋಭಾವ ಹೊಂದ ಬೇಕು.ದೇಶದ ವೀರ ಸ್ವಾತಂತ್ರ್ಯ ಹೋರಾಟಗಾರರು, ನಮ್ಮನ್ನು ಕಾಪಾಡುವಲ್ಲಿ ಬಲಿದಾನವನ್ನು ಮಾಡಿದ ವೀರ ಯೋಧರ ಸ್ಮರಣೆಯಲ್ಲಿ ರಾಜಧಾನಿಯಲ್ಲಿ ಉದ್ಯಾನವನ ನಿರ್ಮಾಣ ಆ ಮೂಲಕ ನಮ್ಮ ಮುಂದಿನ ಪೀಳಿಗೆಯಲ್ಲಿ ಸದಾ ಜಾಗೃತಿ ಮನಸ್ಥಿತಿಯನ್ನು ಮೂಡಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ,ನೆಹರು ಯುವ ಕೇಂದ್ರದ ಜಗದೀಶ್, ಅಂಚೆ ಇಲಾಖೆಯ ಅಧಿಕಾರಿಗಳಾದ ಶಂಕರ್, ಆಡಳಿತಾಧಿಕಾರಿ ತಾಲೂಕು ಪಂಚಾಯತ್ ರವಿಕುಮಾರ್, ರಾಷ್ಟ್ರೀಯ ಸೇವಾ ಯೋಜನೆ ಪ್ರಮುಖರಾದ ನಾಗರತ್ನ, ಉದಯ್ ಕುಮಾರ್. ತಾಲೂಕು ಪಂಚಾಯತ್ ನಿರ್ದೇಶಕ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು