ಇತ್ತೀಚಿನ ಸುದ್ದಿ
ದೇಶದಲ್ಲಿ ಪಿಎಫ್ಐ ಬ್ಯಾನ್: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸ್ವಾಗತ
28/09/2022, 21:20

ಬೆಂಗಳೂರು(reporterkarnataka.com): ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಕರ್ನಾಟಕ ಪ್ರದೇಶ
ಕಾಂಗ್ರೆಸ್ ಸ್ವಾಗತಿಸಿದೆ.
ಕರ್ನಾಟಕ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ ಎಂದು ಹೇಳಿದೆ.
ಪಿಎಫ್‌ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ತಿಳಿಸಿದೆ.