3:44 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ದೇಶ ನಿಮ್ಮೊಂದಿಗಿದೆ; ಧೈರ್ಯದಿಂದಿರಿ: ಕೋವಿಡ್‍ನಿಂದ ಹೆತ್ತವರ ಕಳೆದುಕೊಂಡ ಮಕ್ಕಳಿಗೆ ಧೈರ್ಯ ತುಂಬಿದ ಪ್ರಧಾನಿ 

31/05/2022, 08:22

ಮಂಗಳೂರು(reporterkarnataka.com): ಹೆತ್ತವರ ಪ್ರೀತಿ, ಕಾಳಜಿ ಯಾರೂ ನೀಡಲು ಸಾಧ್ಯವಿಲ್ಲ ಆದರೂ ತಾಯಿ ಭಾರತಿ ನಿಮ್ಮೊಂದಿಗಿದ್ದಾಳೆ, ಪಿ.ಎಂ. ಕೆರ್ಸ್ ಯೋಜನೆ ಮೂಲಕ ಕೇಂದ್ರ ಸರ್ಕಾರ ನಿಮ್ಮೆಲ್ಲರ ಹಿತಾಸಕ್ತಿ ಕಾಯಲು ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು. 

ಅವರು ಸೋಮವಾರ ನವದೆಹಲಿಯಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ಕೋವಿಡ್-19 ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ 18 ವರ್ಷದೊಳಗಿನ ಮಕ್ಕಳೊಂದಿಗೆ ಸಂವಾದ ನಡೆಸಿ ಈ ಮಾತುಗಳನ್ನು ಹೇಳಿದರು. 

ನಗರದ ಜಿಲ್ಲಾ ಪಂಚಯತ್‍ನ ಎನ್‍ಐಡಿ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಸಂವಾದಕ್ಕೆ ವ್ಯವಸ್ಥೆ ಮಾಡಲಾಗಿತ್ತು, ಜಿಲ್ಲೆಯ 11 ಮಕ್ಕಳು ಭಾಗವಹಿಸಿದ್ದರು. 

ಕೋವಿಡ್ ಸೋಂಕಿನ ಸಂಕಷ್ಟದ ದಿನಗಳನ್ನು ಎದುರಿಸಿ ಬಂದಿರುವ ನಿಮ್ಮ ಧೈರ್ಯಕ್ಕೆ ನಾನು ಸೆಲ್ಯೂಟ್ ಹೊಡೆಯುವೆ ಎಂದ ಪ್ರಧಾನಮಂತ್ರಿಗಳು ನಿಮ್ಮ ಕನಸನ್ನು ಸಾಕಾರಗೊಳಿಸುವ ಪಿ.ಎಂ.ಕೇರ್ಸ್‍ನ ಸಣ್ಣ ಪ್ರಯತ್ನವಾಗಿದೆ. ಇಡೀ ದೇಶ, ದೇಶದ ಸಂವೇದನೆ ನಿಮ್ಮೊಂದಿಗೆ ಎಂದು ಮಕ್ಕಳಿಗೆ ಅಭಯ ನೀಡಿದರು. ಈಗಾಗಲೆ ಮಕ್ಕಳ ಮನೆ ಹತ್ತಿರವಿರುವ ಸರ್ಕಾರಿ ಅಥವಾ ಖಾಸಗಿ ಶಾಲೆಗೆ ಶಿಕ್ಷಣಕ್ಕೆ ಪ್ರವೇಶ ಕಲ್ಪಿಸಲಾಗಿದೆ. ಶಿಕ್ಷಣಕ್ಕೆ ಬೇಕಾದ ಪುಸ್ತಕ, ಬಟ್ಟೆ ಇನ್ನಿತರ ಖರ್ಚು ಸಹ ಸರ್ಕಾರ ನೋಡಿಕೊಳ್ಳಲಿದೆ. ಉನ್ನತ ಶಿಕ್ಷಣದ ಜೊತೆಗೆ ಶೈಕ್ಷಣಿಕ ಸಾಲಕ್ಕೂ ಪಿ.ಎಂ.ಕೇರ್ಸ್ ನೆರವಾಗಲಿದೆ. 5 ಲಕ್ಷ ರೂ. ವೆರೆಗಿನ ಉಚಿತ ಚಿಕಿತ್ಸೆಯ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನೀಡಲಾಗುತ್ತಿದೆ. ಮಕ್ಕಳ ಹೆಸರ ಮೇಲೆ ಅಂಚೆ ಬ್ಯಾಂಕ್‍ನಲ್ಲಿ ಇಡಲಾಗುವ ಇಡಗಂಟಿನ ಮೇಲೆ ಲಭ್ಯವಾಗುವ ಬಡ್ಡಿಯನ್ನು 18 ರಿಂದ 23 ವಯಸ್ಸಿನ ಅವಧಿಯಲ್ಲಿ ಪ್ರತಿ ತಿಂಗಳ ಸ್ಟೇಫಂಡ್ ರೂಪದಲ್ಲಿ ಖರ್ಚಿಗೆ ಹಣ ನೀಡಲಾಗುವುದು. 23 ವರ್ಷದ ನಂತರ ಮುಂದಿನ ಭವಿಷ್ಯಕ್ಕೆ 10 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು. ಇದಲ್ಲದೆ ಸ್ಪಾನ್ಶರಶಿಪ್ ಯೋಜನೆಯಡಿ ಮಾಹೆಯಾನ 2000 ರೂ. ಆರ್ಥಿಕ ಸೌಲಭ್ಯ 2021-22ನೇ ಸಾಲಿನಿಂದ ಜಾರಿಗೊಳಿಸಿದ್ದು, 18 ವರ್ಷದೊಳಗಿನ ಮಕ್ಕಳಿಗೆ ಗರಿಷ್ಠ 3 ವರ್ಷ ಅಥವಾ 18 ವರ್ಷದ ವರೆಗೆ (ಇದರಲ್ಲಿ ಯಾವುದು ಮೊದಲು ಅಲ್ಲಿಯ ವರೆಗೆ) ಇದು ಸಿಗಲಿದೆ ಎಂದು ಪಿ.ಎಂ.ಕೇರ್ ಯೋಜನೆಗಳ ಕುರಿತು ವಿವರಿಸಿದರು.

ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 1-12ನೇ ತರಗತಿ ವರೆಗೆ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಡಿಜಿಟಲ್ ಮೋಡ್ ಮೂಲಕ ಸ್ಕಾಲರ್ ಶಿಪ್ ಹಣ ವರ್ಗಾವಣೆಗೊಳಿಸಿದರು.

ಇದಕ್ಕೂ ಮುನ್ನ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಮಾತನಾಡಿ ದೇಶದಲ್ಲಿ ಕೋವಿಡ್‍ನಿಂದ ಹೆತ್ತವರನ್ನು ಕಳೆದುಕೊಂಡ  4345 ಮಕ್ಕಳ ರಕ್ಷಣೆಯ ಜವಬ್ದಾರಿ ಸರ್ಕಾರ ವಹಿಸಿಕೊಂಡಿದೆ ಎಂದರು.

ಜಿಲ್ಲಾಧಿಕಾರಿಗಳಿಂದ ಕಿಟ್ ವಿತರಣೆ: ಕೋವಿಡ್ ನಿಂದ ತಂದೆ-ತಾಯಿಗಳನ್ನು ಕಳೆದಕೊಂಡ ಜಿಲ್ಲೆಯ ಶ್ರದ್ಧಾ ಹಾಗೂ ಗೇವಿನ್ ಸೇರಿದಂತೆ 11 ಮಕ್ಕಳಿಗೆ ವಿಡಿಯೋ ಸಂವಾದದ ಮುಕ್ತಾಯವಾದ ನಂತರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು 10 ಲಕ್ಷ ರೂ.ಗಳ ಅಂಚೆ ಇಲಾಖೆ ಪಾಸ್ ಬುಕ್, ಮಕ್ಕಳಿಗೆ ಪ್ರಧಾನ ಮಂತ್ರಿಗಳು ಬರೆದ ಸ್ನೇಹ ಪತ್ರ, ಆಯುಷ್ಮಾನ್ ಆರೋಗ್ಯ ಕಾರ್ಡ್ ಒಳಗೊಂಡ ಕಿಟ್ ವಿತರಿಸಿ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿ, ಈ ಮಕ್ಕಳಿಗೆ ಆಯುಷ್ಮಾನ್ ಕಾರ್ಡ್  ಸೇವೆ ಒದಗಿಸುವ ಆಸ್ಪತ್ರೆಗಳ ಪಟ್ಟಿಯನ್ನು ಒದಗಿಸುವಂತೆ, ಈ ಮಕ್ಕಳಿಗೆ ಪ್ರವಾಸವೊಂದನ್ನು ಆಯೋಜಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ತಿಳಿಸಿದರು. 


10 ಲಕ್ಷ ರೂ.ಗಳು ಆ ಮಕ್ಕಳಿಗೆ 18 ವರ್ಷ ತುಂಬುವವರಗೆ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಮಕ್ಕಳ ಜಂಟಿ ಖಾತೆಯಲ್ಲಿ ಹಣವಿರುತ್ತದೆ, 18 ವರ್ಷ ಪೂರೈಸಿದ ನಂತರ ಆ ಮಕ್ಕಳ ಸ್ವಂತ ಖಾತೆಗೆ ಹಣ ವರ್ಗಾವಣೆಯಾಗುತ್ತದೆ. ಆ ಮಕ್ಕಳು 23ನೇ ವರ್ಷಕ್ಕೆ ಹಣವನ್ನು ಬಳಸಬಹುದಾಗಿದೆ. 18ರಿಂದ 23 ವರ್ಷದ ವರೆಗೆ ಠೇವಣಿ ಇರಿಸಿದ ಹಣಕ್ಕೆ ಆ ಮಕ್ಕಳಿಗೆ ಬಡ್ಡಿ ಹಣ ಸಂದಾಯವಾಗಲಿದೆ.   ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪಾಪಬೋವಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಯಮುನ, ಹಿರಿಯ ಅಂಚೆ ನಿರೀಕ್ಷಕ ಶ್ರೀಹರ್ಷ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ರೆನ್ನಿ ಡಿಸೋಜ, ಬಾಲನ್ಯಾಯ ಮಂಡಳಿ ಸದಸ್ಯರಾದ ಐಡಾ ಡಿಸೋಜ, ಯುನಿಸೆಫ್ ಸದಸ್ಯರಾದ ಸಿಸ್ಟರ್ ಡುಲ್ಸಿನ್ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು