8:47 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ದೇಶ ವಿರೋಧಿ ದುಷ್ಟ ಶಕ್ತಿಗಳು ಬಿಲದಿಂದ ಹೊರಗೆ ಬರುತ್ತಿವೆ: ಶಾಸಕ ಡಾ. ಭರತ್ ಶೆಟ್ಟಿ ಕಳವಳ

19/07/2023, 19:21

ಸುರತ್ಕಲ್(reporterkarnataka.com):ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಬಿಲದಲ್ಲಿ ಅಡಗಿ ಕುಳಿತಿದ್ದ ದುಷ್ಟ ಶಕ್ತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ .ಇದಕ್ಕೆ ಕಾಂಗ್ರೆಸ್ ಪಕ್ಷದ ಮೇಲೆ, ಹಾಗೂ ಅದರ ಆಡಳಿತದ ಮೇಲೆ ಯಾವುದೇ ಹೆದರಿಕೆ ಇಲ್ಲದಿರುವುದೇ ಕಾರಣ ಎಂದು ಡಾ. ಭರತ್ ಶೆಟ್ಟಿ ಹೇಳಿದ್ದಾರೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ಉಗ್ರರ ಚಟುವಟಿಕೆಗಳನ್ನ ಸಂಪೂರ್ಣ ಮಟ್ಟ ಹಾಕಲಾಗಿತ್ತು. ಇದೀಗ ರಾಜಾರೋಷವಾಗಿ ಬಾಂಬುಗಳ ತಯಾರಿಕೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಬೆಂಗಳೂರಿನಲ್ಲಿ ಓಡಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಉಗ್ರ ವಿದ್ವಾಂಸಕ ಕೃತ್ಯ ನಡೆಸಲು ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ಇವರ ಗುರಿ ಹಿಂದೂ ಸಮುದಾಯವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.
ಕಾಂಗ್ರೆಸ್ ಸರ್ಕಾರವು ತಕ್ಷಣ ರಾಜ್ಯದ ಜನರ ಸುರಕ್ಷತೆಯ ಬಗ್ಗೆ ಮೊದಲ ಆದ್ಯತೆಯನ್ನು ನೀಡಬೇಕು. ಸಿಂಧನೂರು ಬಂಗಾಳಿ ಕ್ಯಾಂಪ್ ಗೆ ನುಗ್ಗಿ ದಾಂಧಲೆಗೈದವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳ ಬೇಕು. ಅಲ್ಪಸಂಖ್ಯಾತ ಸಮುದಾಯಕ್ಕೆ ನೋವಾಗುತ್ತದೆ ಎಂದು ಮೀನಾ ಮೇಷ ಎಣಿಸದೆ ಇಂತಹ ಉಗ್ರ ಕೃತ್ಯಗಖನ್ನು ಕೃತ್ಯಗಳನ್ನು ಬೇರು ಸಹಿತ ಕಿತ್ತು ಹಾಕಲು ಯಾವುದೇ ತಪಾಸಣೆ,ವಿಚಾರಣೆಗಾಗಿ ಪೊಲೀಸ್ ಇಲಾಖೆ ಸೂಕ್ತ ಕ್ರಮವನ್ನು ಕೈಗೊಳ್ಳಲು ಮುಕ್ತ ಅವಕಾಶ ನೀಡಬೇಕು ಎಂದು ಡಾ.ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು