4:17 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ದೇಶದ ರಾಜಕೀಯ ಚಿತ್ರಣ ಬದಲಾಗಲು ಮಂಗಳೂರಿನ ಫಲಿತಾಂಶ ನಾಂದಿ ಹಾಡಲಿದೆ: ಸಚಿವ ಮಧು ಬಂಗಾರಪ್ಪ

24/09/2023, 18:40

ಮಂಗಳೂರು(reporterKarnataka.com): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಖಂಡಿತವಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸನ್ನು ಕೈಹಿಡಿಯಲುದ್ದಾರೆ. ಮತೀಯ ವಾದ, ಕೋಮುವಾದದ ಭಾವನಾತ್ಮಕ ವಿಚಾರಗಳಿಂದ ಜನ ವಿಮುಖರಾಗುತ್ತಿದ್ದಾರೆ ಎಂದು ಶಿಕ್ಷಣ ಸಚಿವ, ಮಂಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯ ಉಸ್ತುವಾರಿ ಮಧು ಬಂಗಾರಪ್ಪ ಹೇಳಿದರು.


ಅವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆಯ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಕರೆದಿದ್ದ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಕರ್ನಾಟಕ ಕಾಂಗ್ರೆಸ್ ಸರಕಾರ ಕೊಟ್ಟಿರುವ ಗ್ಯಾರೆಂಟಿಗಳು ಜನರ ಬದುಕನ್ನು ಬೆಳಗಿಸಿವೆ. ಇದರ ಪ್ರಭಾವ ಮುಂದಿನ ಚುನಾವಣೆಯಲ್ಲಿ ಪ್ರತಿಬಿಂಬಿತವಾಗಲಿದೆ ಎಂದು ಅವರು ನುಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಕಾರ್ಯಕರ್ತರ, ಸಂಘ ಸಂಸ್ಥೆಗಳ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸರ್ವೆ ನಡೆಸಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ಅವರು ಸಭೆಯ ಅಧ್ಯಕ್ಷ ವಹಿಸಿದ್ದರು.
ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್ ಮಾತನಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಬಿ. ಇಬ್ರಾಹಿಂ, ಅಶೋಕ್ ಕುಮಾರ್ ರೈ, ಜೆ. ಆರ್. ಲೋಬೊ, ಮಿಥುನ್ ರೈ, ಇಬ್ರಾಹಿಂ ಕೊಡಿಜಾಲ್, ಶಶಿದರ್ ಹೆಗ್ಡೆ, ಲುಕ್ಮನ್ ಬಂಟ್ವಾಳ್, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಕೃಪಾ ಆಳ್ವಾ, ಅಶ್ವಿನ್ ಕುಮಾರ್ ರೈ,ಇನಾಯತ್ ಅಲಿ, ಜಿ ಕೃಷ್ಣಪ್ಪ, ಬ್ಲಾಕ್ ಅಧ್ಯಕ್ಷರುಗಳು , ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ನಾಯಕರು, ಮನಪಾ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು