2:48 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ದೇಶದ ಸಂಸ್ಕೃತಿ, ಆಚಾರ- ವಿಚಾರ ಉಳಿಸಲು ಸಂವಿಧಾನ ಸಹಕಾರಿ: ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್

29/11/2022, 19:02

ಮಂಗಳೂರು(reporterkarnataka.com): ದ.ಕ. ಜಿಲ್ಲೆ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ 2022 ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ (ರಿ.) ದ.ಕ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ನಗರದ ಬೆಂದೂರ್ ವೆಲ್ ನ
ಶಿಕ್ಷಣ ಸಂಪನ್ಮೂಲ ಕೇಂದ್ರ ಪಡಿ ಸಂಸ್ಥೆಯ ಸಹಕಾರದೊಂದಿಗೆ ಶಾಸಕ ಯು.ಟಿ.ಖಾದರ್ ಅವರೊಂದಿಗೆ ಉಳ್ಳಾಲ ನಗರ ಸಭೆ ವ್ಯಾಪ್ತಿಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರ ಸಂವಾದ ಕಾರ್ಯಕ್ರಮ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ನಡೆಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ದ.ಕ ಜಿಲ್ಲೆಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಜಿ. ಶೋಭಾ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಹೆಣ್ಣು ಮಕ್ಕಳ ಮೇಲಿನ ಹೀನಾಯವಾದ ಅಪರಾಧವನ್ನು ತಡೆಗಟ್ಟಲು ಪೋಕ್ಸೋ ಕಾಯಿದೆಯನ್ನು ತರಲಾಗಿದೆ. ಹೆಣ್ಣು ಮಕ್ಕಳು ಹೆಚ್ಚಾಗಿ ಹೊಗಳಿಕೆಗೆ ಮರಳಾಗುತ್ತಾರೆ, ಪರಿಸರದವರು ಯಾವ ಉದ್ದೇಶಕ್ಕೆ ನಮ್ಮಲ್ಲಿ ಮಾತನಾಡುತ್ತಾರೆ ಎಂಬ ತಿಳುವಳಿಕೆ ನಮ್ಮಲ್ಲಿರಬೇಕು ಎಂದರು.

ಉಳ್ಳಾಲ ನಗರಸಭೆ ವ್ಯಾಪ್ತಿಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರ ಸಂವಾದ ಕಾರ್ಯದಲ್ಲಿ ಮಾತನಾಡಿದ ಶಾಸಕ ಯು.ಟಿ.ಖಾದರ್ ನಮ್ಮೆಲ್ಲರಿಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಿರ್ಬೀತಿಯಿಂದ ಓಡಾಡಲು ಧೈರ್ಯ ಬಂದಿದ್ದರೆ ಅದು ನಮ್ಮಂತ ರಾಜಕಾರಣಿಯಲ್ಲ, ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನದಿಂದ ಆಗಿದೆ. ಈ ನಿಟ್ಟಿನಲ್ಲಿ ಭಾರತ ದೇಶದ ಸಂಸ್ಕೃತಿ ಆಚಾರ ವಿಚಾರಗಳನ್ನು ಉಳಿಸಲು ಸಂವಿಧಾನ ಸಹಕಾರಿಯಾಗಿದೆ. ದೇವರು ನೀಡಿದ ಆಯುಷ್ಯದಲ್ಲಿ ನಾವೆಲ್ಲರೂ ಸಂತೋಷದಿಂದ ಬದುಕಬೇಕು. ದ್ವೇಷ ಮತ್ತು ದುಶ್ಚಟದಿಂದ ದೂರ ಇರಬೇಕು ಎಂದು ಹೇಳಿದರು.

ಉಳ್ಳಾಲ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ರೇವಣ ಸಿದ್ದ ಅವರು ಮೊಬೈಲ್ , ಮಾದಕ ದ್ರವ್ಯ ಮಕ್ಕಳು ವಿಷಯದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು.
ತೊಕ್ಕೊಟ್ಟು ಅಂಬಾವನ ನಾಗಕನ್ನಿಕಾ ದೇವಸ್ಥಾನದ ಅಧ್ಯಕ್ಷರಾದ ಸುಂದರ್ ಗಟ್ಟಿ ಅಧ್ಯಕ್ಷತೆ ವಹಿಸಿದರು.

ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಮತ್ತು ಮಕ್ಕಳ ರಕ್ಷಣಾಧಿಕಾರಿ ಶೈಲಜಾ ಕಾರಗಿ, ದ.ಕ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳ್ಳೇಪಾಡಿ, ಮೆಸ್ಕಾಂ ಇಲಾಖೆಯ ಹಿರಿಯ ಇಂಜಿನಿಯರ್ ಮಾರಪ್ಪ, ಉದ್ಯಮಿ ಅಲ್ತಾಫ್ ಒಡೆಯರ್,ಚೈಲ್ಡ್ ಲೈನ್ 1098 ರ ಸದಸ್ಯೆ ರೇವತಿ, ಪಡಿ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಗ್ರೀಷ್ಮಾ, ಬಂಟ್ವಾಳ ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯ ಹ್ಯಾರೀಸ್ ಮೊದಲಾದವರು ಉಪಸ್ಥಿತರಿದ್ದರು.

ವಕಾಲತ್ತು ಸಂಯೋಜಕ ಸಿದ್ದಾಂತ್ ಪಿ. ಪ್ರಾಸ್ತವಿಕವಾಗಿ ಮಾತನಾಡಿದರು, ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ 2022 ದ.ಕ ಜಿಲ್ಲೆಯ ಸಂಚಾಲಕಿ ಕಮಲಾ ಗೌಡ ಸ್ವಾಗತಿಸಿದರು. ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಜೊ ತೆಕಾರ್ಯದರ್ಶಿ ಆರ್.ಉಷಾ ನಾಯಕ್ ಆಶಯ ಗೀತೆ ಹಾಡಿದರು,ಮಂಗಳೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ಆಶಾಲತಾ ಸುವರ್ಣ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು