3:41 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದೇಶವನ್ನೇ ಬೆಚ್ಚಿ ಬೀಳಿಸಿದ ಶೃಂಗೇರಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಒಟ್ಟು 42 ಮಂದಿ ಬಂಧನ

06/07/2021, 08:56

ಚಿಕ್ಕಮಗಳೂರು(reporterkarnataka news);

ಶೃಂಗೇರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 42 ಮಂದಿಯನ್ನು ಬಂಧಿಸಲಾಗಿದ್ದು, ಇವರಲ್ಲಿ 30 ಮಂದಿಯ ವಿರುದ್ಧ ಪೊಕ್ಸಾ ಕಾಯಿದೆಯಡಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಜನವರಿ 30 ರಂದು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಶೃಂಗೇರಿ ಠಾಣೆಗೆ ಪ್ರಕರಣ ಕುರಿತು ದೂರು ನೀಡಿದ್ದರು. ಅನೇಕ ಮಂದಿ ಪುರುಷರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಕುರಿತು ಆರೋಪಿಸಿದ್ದರು. ತನಿಖೆ ನಡೆಸಿದ ಪೊಲೀಸರು, ಅತ್ಯಾಚಾರ ನಡೆಸಿದವರು ಸಂಖ್ಯೆ ಕೇಳಿ ಬೆಚ್ಚಿ ಬಿದ್ದಿದ್ದರು. ಬಾಲಕಿಯ ಚಿಕ್ಕಮ್ಮ ಎನ್ನಲಾದ ಮಹಿಳೆಯೇ ಪ್ರಕರಣದ ಪ್ರಮುಖ ಸೂತ್ರದಾರಳಾಗಿದ್ದಾಳೆ. ಹಣಕ್ಕಾಗಿ ಈಕೆಯೇ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲು ಅವಕಾಶ ನೀಡುತ್ತಿದ್ದಳು ಎಂದು ತಿಳಿದು ಬಂದಿದೆ.

ಜಿಲ್ಲೆಯ ಇತಿಹಾಸದಲ್ಲಿ ಒಂದೇ ಪ್ರಕರಣದಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಚಾರ್ಜ್‌ಶೀಟ್‌ಗಳನ್ನು ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು