10:49 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ದೇಶವನ್ನು ಮುಂದಕ್ಕೆ ಕರೆದೊಯ್ಯುವ ಸಮಯ ಬಂದಿದೆ: ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

15/08/2022, 10:15

ಹೊಸದಿಲ್ಲಿ(reporterkarnataka.com): ನಾವು ದೇಶವನ್ನು ಮುಂದಕ್ಕೆ ಕರೆದೊಯ್ಯುವ ಸಮಯ ಈಗ ಬಂದಿದೆ. ಪ್ರತಿ ತ್ಯಾಗವನ್ನೂ ಗೌರವಿಸುತ್ತೇವೆ. ಪ್ರತಿ ನಾಯಕರ ಕನಸನ್ನು ಈಡೇರಿಸುತ್ತೇವೆ. ಸ್ವಾತಂತ್ರ್ಯದ ಮಹೋತ್ಸವದ ವೇಳೆ ನಾವು ಅನೇಕ ರಾಷ್ಟ್ರೀಯ ನಾಯಕರನ್ನು ಸ್ಮರಿಸುತ್ತಿದ್ದೇವೆ. ಆಗಸ್ಟ್ 14ರಂದು ನಾವು ದೇಶ ವಿಭಜನೆಯ ಭಯಾನಕತೆಯನ್ನು ಸ್ಮರಿಸಿದ್ದೇವೆ. ಇಂದು ಕಳೆದ 75 ವರ್ಷಗಳಲ್ಲಿ ನಮ್ಮ ದೇಶವನ್ನು ಮುಂದಕ್ಕೆ ಕೊಂಡೊಯ್ಯುವಲ್ಲಿ ಕೊಡುಗೆ ನೀಡಿದ ಎಲ್ಲ ನಾಗರಿಕರನ್ನು ನೆನಪಿಸಿಕೊಳ್ಳುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ರಾಜಧಾನಿ ದಿಲ್ಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ಅವರು ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸೋಮವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕರ್ತವ್ಯದ ಹಾದಿಯಲ್ಲಿ ತಮ್ಮ ಪ್ರಾಣ ನೀಡಿದ ಬಾಪು, ನೇತಾಜಿ ಸುಭಾಷ್ ಚಂದ್ರ ಬೋಸ್, ಬಾಬಾ ಸಾಹೇಬ್ ಅಂಬೇಡ್ಕರ್, ವೀರ್ ಸಾವರ್ಕರ್ ಮುಂತಾದವರನ್ನು ಭಾರತದ ನಾಗರಿಕರು ಸ್ಮರಿಸುತ್ತಾರೆ. ಕರ್ತವ್ಯದ ಪಥವೇ ಅವರ ಜೀವನದ ಪಥವಾಗಿತ್ತು ಎಂದು ಮೋದಿ ಹೇಳಿದ್ದಾರೆ.

ಬ್ರಿಟಿಷರ ಆಡಳಿತದ ವಿರುದ್ಧ ಬಂಡಾಯವೇಳದ ಜಾಗವೇ ಈ ದೇಶದಲ್ಲಿ ಇಲ್ಲ. ರಾಣಿ ಲಕ್ಷ್ಮೀಬಾಯಿ, ಝಲ್ಕಾರಿ ಭಾಯಿ, ಚೆನ್ನಮ್ಮ, ಬೇಗಂ ಹಜರತ್ ಮಹಲ್ ಇರಬಹುದು- ಭಾರತದ ಮಹಿಳೆಯರ ಶಕ್ತಿಯನ್ನು ನೆನಪಿಸಿಕೊಂಡಾಗ ಪ್ರತಿ ಭಾರತೀಯನೂ ಹೆಮ್ಮೆಪಟ್ಟುಕೊಳ್ಳುತ್ತಾರೆ. ಈ ದೇಶವು ಬ್ರಿಟಿಷರ ತಳಹದಿಯನ್ನು ಅಲುಗಾಡಿಸಿದ ಮಂಗಳ್ ಪಾಂಡೆ, ತಾತ್ಯಾ ಟೋಪೆ, ಭಗತ್ ಸಿಂಗ್, ಸುಖದೇವ್, ರಾಜಗುರು, ಚಂದ್ರಶೇಖರ್ ಆಜಾದ್, ಅಶ್ಫಾಕುಲ್ಲಾ ಖಾನ್, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ನಮ್ಮ ಅಸಂಖ್ಯಾತ ಕ್ರಾಂತಿಕಾರಿಗಳಿಗೆ ಕೃತಜ್ಞವಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಅಥವಾ ಕಟ್ಟುವಲ್ಲಿ ಕೊಡುಗೆ ನೀಡಿದ ಡಾ. ರಾಜೇಂದ್ರ ಪ್ರಸಾದ್, ನೆಹರೂ, ಸರ್ದಾರ್ ಪಟೇಲ್, ಎಸ್‌ಪಿ ಮುಖರ್ಜಿ, ಲಾಲ್ ಬಹದ್ದೂರ್ ಶಾಸ್ತ್ರಿ, ದೀನ್‌ದಯಾಳ್ ಉಪಾಧ್ಯಾಯ, ಜೆಪಿ ನಾರಾಯಣ, ರಾಮ್ ಮನೋಹರ್ ಲೋಹಿಯಾ, ವಿನೋಬಾ ಭಾವೆ, ನಾನಾಜಿ ದೇಶ್‌ಮುಖ್, ಸುಬ್ರಮಣ್ಯ ಭಾರತಿ ಇರಬಹುದು- ಇಂದು ಅಂತಹ ಮಹಾನ್ ವ್ಯಕ್ತಿತ್ವಗಳಿಗೆ ತಲೆಬಾಗುವ ದಿನ ಎಂದರು.

ಕೆಂಪುಕೋಟೆಯಲ್ಲಿ ಗೌರವ ವಂದನೆ ಪಡೆದ ಪ್ರಧಾನಿ, 20 ಸಿಬ್ಬಂದಿಯನ್ನು ಒಳಗೊಂಡ ವಾಯುಪಡೆಯ ಬ್ಯಾಂಡ್‌ ರಾಷ್ಟ್ರಧ್ವಜವನ್ನು ನುಡಿಸುವಾಗ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. 


ಈ ವೇಳೆ ಸ್ಕ್ವಾಡ್ರನ್ ಲೀಡರ್ ಸುನೀತಾ ಯಾದವ್ ಅವರು ಪ್ರಧಾನಿಗೆ ಸಹಾಯ ಮಾಡಿದರು. ಎರಡು ಎಂಐ-17 IV ಹೆಲಿಕಾಪ್ಟರ್‌ಗಳ ಮೂಲಕ ಅಮೃತ್ ಫಾರ್ಮೇಷನ್ ಸ್ಥಳದಲ್ಲಿ ಪುಷ್ಪಾರ್ಚನೆ ಮಾಡಲಾಯಿತು. ಬಳಿಕ ಪ್ರಧಾನಿ ಮೋದಿ ಅವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು