10:20 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ

09/01/2025, 17:09

ಬೆಂಗಳೂರು (reporterkarnataka.com): ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವಎನ್. ಚಲುವರಾಯಸ್ವಾಮಿ ಹೇಳಿದರು.
ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ ಸಂಕ್ರಾಂತಿ ಸವಿ ರುಚಿ ಸಪ್ತಾಹ ಉದ್ಘಾಟಿಸಿ ಸಚಿವರು ಮಾತನಾಡಿದರು.
ಸಿರಿ ಧನ್ಯಾಗಳು ನಮ್ಮ ಆರೋಗ್ಯಕ್ಕೆ ಪೂರಕ. ಅದರ ಉತ್ತೇಜನಕ್ಕೆ ಜ‌. 23-25ರ ವರಗೆ ಬೆಂಗಳೂರಿನ ಅರಮೆನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳ ಆಯೋಜಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಬೆಂಗಳೂರು ಸಂಪೂರ್ಣ ಕರ್ನಾಟಕದ ಪರಿಕಲ್ಪನೆಯ ನಗರ. ಇಲ್ಲಿ ಎಲ್ಲಾ ತರದ ತಿನಿಸು ಲಭ್ಯ. ಅದರೆ ನಮ್ಮ ಕರ್ನಾಟಕದ ಆಹಾರಗಳ ಸತ್ವ ಮತ್ತು ಸವಿಯನ್ನು ಉಣ ಬಡಿಸುತ್ತಾ 25 ವರ್ಷಕ್ಕೆ ಪಾದಾರ್ಪಣೆ ಮಾಡಿದ ನಳಪಾಕ ಹೋಟೆಲ್ ನ ಯಶಸ್ಸು ಅಭಿನಂದನೀಯ ಎಂದು ಚಲುವರಾಯಸ್ವಾಮಿ ಹೇಳಿದರು.
ಸಂಕ್ರಾಂತಿ ರೈತರ ಸಂಭ್ರಮ ಹಂಚಿಕೆಯ ಸುಗ್ಗಿ ಹಬ್ಬ . ಈ ಬಾರಿ ಜ 14ರಂದು ನಾಗಮಂಗಲ ಕ್ಷೇತ್ರದ ದೇವಲಾಪುರ ಗ್ರಾಮದಲ್ಲಿ ವಿಶೇಷ ಸಂಕ್ರಾಂತಿ ಕಾರ್ಯಕ್ರಮ‌ ಆಯೋಜಿಸಿದ್ದು ರೈತಾಪಿ ಕುಟುಂಬದೊಂದಿಗೆ ಒಂದು ದಿನ ಕಾಲಕಳೆಯಲು ಬಯಸಿದ್ದೇನೆ ಎಂದು ಅವರು ತಿಳಿಸಿದರು.
ಮಾಜಿ ಸಚಿವರು ಹಾಗೂ ಶಾಸಕರಾದ ಗೋಪಾಲಯ್ಯ ಅವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು