6:26 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ದೇವರಮನೆಯಲ್ಲಿ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು

19/03/2024, 12:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ದೇವರ ಮನೆಯಲ್ಲಿ ಕಾಡಾನೆಯೊಂದು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದು ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರಾದ ಘಟನೆ ಸೋಮವಾರ ಸಂಜೆ ನಡೆದಿದೆ.
ಮೂಡಿಗೆರೆ ಪಟ್ಟಣದ ನಿವಾಸಿ ಲೋಕೇಶ್ ಮತ್ತು ಅವರ ಸಹೋದರಿ ದೇವರಮನೆ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹಿಂದಿರುವಾಗ ದೇವರಮನೆ ರಸ್ತೆಯಲ್ಲಿ ಕಾಡಾನೆ ಬೈಕಿಗೆ ಅಡ್ಡ ಬಂದು ಅಟ್ಟಿಸಿಕೊಂಡು ಬಂದಿದೆ. ತಕ್ಷಣ ಬೈಕ್ ಸವಾರರು ಓಡಿ ಹೋಗಿದ್ದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್ ಸವಾರರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು ಬೈಕ್ ಜಖಂಗೊಂಡಿದೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳಾದ ಅಭಿಜಿತ್, ಬಣಕಲ್ ಠಾಣಾ ಪಿಎಸ್‌ಐ ಎನ್.ಕೆ.ಓಮನಾ, ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು