7:54 AM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸಲಕರಣೆ ವಿತರಣೆ

09/12/2024, 20:48

ಬಂಟ್ವಾಳ(reporterkarnataka.com): ಆರ್ಥಿಕವಾಗಿ ಹಿಂದುಳಿದ ಅರ್ಹ ಫಲಾನುಭವಿಗಳಿಗೆ ಸರಕಾರವು ವಿವಿಧ ಸಲಕರಣೆಗಳನ್ನು ನೀಡುತ್ತಿದ್ದು, ಅದನ್ನು ಪಡೆದುಕೊಂಡವರು ತಮ್ಮ ಆದಾಯಕ್ಕೆ ಪೂರಕವಾಗಿ ಬಳಸಿಕೊಂಡು ಸ್ವಾಭಿಮಾನದ ಜೀವನ ನಡೆಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಅವರು ತಮ್ಮ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಫಲಾನುಭವಿಗಳಿಗೆ ಮಂಜೂರಾದ ವಿವಿಧ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.
ಪ್ರಸ್ತುತ ಅರ್ಜಿ ಹಾಕಿರುವ ೧೨೬ ಮಂದಿಯ ಪೈಕಿ ಸರಕಾರದ ಗುರಿಯಂತೆ ೩೬ ಮಂದಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಟೈಲರಿಂಗ್ ಯಂತ್ರ ನೀಡಲಾಗಿದ್ದು, ಮುಂದೆ ಮತ್ತೆ ಯಂತ್ರ ಮಂಜೂರಾದಾಗ ಉಳಿದ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.


ಕಾರ್ಮಿಕ ಇಲಾಖೆಯ ಮೂಲಕ ಬಂಟ್ವಾಳ ಕ್ಷೇತ್ರದಲ್ಲಿ ಪ್ರಸ್ತುತ ೩೧೮ ಮಂದಿ ಮೇಸ್ತ್ರಿ ಗಳಿಗೆ ಕಿಟ್, ೧೦೧ ಮಂದಿ ವೆಲ್ಡರ್‌ಗಳಿಗೆ ಕಿಟ್ ಹಾಗೂ ೬೩ ಮಂದಿ ಎಲೆಕ್ಟ್ರೀಷಿಯನ್ ಗಳಿಗೆ ಸೇರಿ ಒಟ್ಟು ೪೮೨ ಮಂದಿಗೆ ಕಿಟ್ ಮಂಜೂರಾಗಿದ್ದು, ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಲಾಯಿತು. ಜತೆಗೆ ೩೬ ಮಂದಿ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ನೀಡಲಾಯಿತು.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ್, ಬಂಟ್ವಾಳ ಕಾರ್ಮಿಕ ನಿರೀಕ್ಷಕಿ ಲವಿನಾ ಡಿಸೋಜ, ಕಚೇರಿ ಸಹಾಯಕರಾದ ಶಶಿಧರ, ಮುರಳಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು