2:08 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ನಿರ್ಧಾರ ಸ್ವಾಗತಾರ್ಹ: ಬಿಜೆಪಿ ರಾಜ್ಯಾಧ್ಯಕ್ಷ 

03/01/2022, 22:13

ಮಂಗಳೂರು(reporterkarnataka.com):

ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ಬೊಮ್ಮಾಯಿಯವರ ನಿರ್ಧಾರ ಸ್ವಾಗತಾರ್ಹ. ಇದು ರಾಜ್ಯದ ಹಿಂದೂಗಳ ಭಾವನೆ ಆಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಂಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ಸರ್ಕಾರದ ಹಸ್ತಕ್ಷೇಪ ಇರದೇ, ಅಲ್ಲಿನ ಅಭಿವೃದ್ಧಿ ಅಲ್ಲೇ ಆಗಬೇಕಾಗಿದೆ.

ಆದರೆ ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕಾರಣ ಮಾಡ್ತಿದೆ, ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಹೊಂದಿದೆ ಎಂದು ಟೀಕಿಸಿದರು.

ಮತಾಂತರ ಕಾಯ್ದೆ, ಸಿಎಎ ಕಾಯ್ದೆ, ಈಗ ದೇವಸ್ಥಾನ ಸ್ವಾಯತ್ತೆಗೂ ವಿರೋಧ ವ್ಯಕ್ತಪಡಿಸುತ್ತಿದೆ. ಅಲ್ಪಸಂಖ್ಯಾತ ಮತಕ್ಕಾಗಿ ಹಿಂದೂ ಸಮಾಜಕ್ಕೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ.ಕಾಂಗ್ರೆಸ್ ಗೆ ಹಿಂದೂ ಧರ್ಮ, ಹಿಂದೂ ಜನರ ಮೇಲೆ ನಂಬಿಕೆ ಇಲ್ಲ ಎಂದರು.

ಬೊಮ್ಮಾಯಿ ನಿರ್ಧಾರ ಸರಿ ಇದೆ, ಎಲ್ಲಾ ಮಠಾಧೀಪತಿಗಳು, ದೇವಸ್ಥಾನದವರು ಇದನ್ನ ಸ್ವಾಗತಿಸಿದ್ದಾರೆ. ಮತಾಂತರ ಮತ್ತು ದೇವಸ್ಥಾನ ವಿಚಾರದಲ್ಲಿ ಸರ್ಕಾರದ ನಿರ್ಧಾರ ನಾನು ಸ್ವಾಗತಿಸುತ್ತೇನೆ ಎಂದು ಅವರು ನುಡಿದರು.

ಸಿದ್ದರಾಮಯ್ಯ ಟೀಕೆ ಮಾಡ್ತಿದಾರೆ, ಆದ್ರೆ ಟಿಪ್ಪು ಜಯಂತಿ ಯಾರ ಓಲೈಕೆಗೆ ಮಾಡಿದ್ದು? ಶಾದಿ ಭಾಗ್ಯ ಯೋಜನೆಯಲ್ಲೂ ಅಲ್ಪಸಂಖ್ಯಾತರನ್ನ ಹುಡುಕಿ ಮತೀಯ ಭಾವನೆ ತಂದಿದ್ದಾರೆ. ಕಾಂಗ್ರೆಸ್ ಸಂಪೂರ್ಣ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಅಹಿಂದ ಚಳುವಳಿ ಮಾಡಿದ್ರಿ, ಆದ್ರೆ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ಪುಟ್ಟಪ್ಪ ಸತ್ತಾಗ ಏನ್ ಮಾಡಿದ್ರಿ? ಕಾಂಗ್ರೆಸ್ ನ ಈ ವಿರೋಧಿ ಧೋರಣೆಯನ್ನ ಹಿಂದೂ ಸಮಾಜ‌ ತಿರಸ್ಕರಿಸುತ್ತೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು