10:42 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ದೇವೇಗೌಡ-ಕುಮಾರಸ್ವಾಮಿ ಅವರಿಗೆ ವಿಶಾಲ ಹೃದಯ ಇಲ್ಲ; ಅವರನ್ನು ಪಿಎಂ-ಸಿಎಂ ಮಾಡಿದ್ದು ನಮ್ಮ ಪಕ್ಷ: ಡಿಸಿಎಂ ಡಿ.ಕೆ‌. ಶಿವಕುಮಾರ್

20/03/2026, 22:57

ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷವು ಜಾತ್ಯತೀತ ತತ್ವ ಉಳಿಸಬೇಕು ಎಂಬ ಕಾರಣಕ್ಕೆ ದೇವೇಗೌಡರನ್ನು ಪ್ರಧಾನಿ ಮಾಡಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದೆವು. ನಮ್ಮ ಪಕ್ಷ ಅವರಿಗೆ ಎಲ್ಲಾ ಅವಕಾಶಗಳನ್ನು ನೀಡಿದೆ.

ಆದರೆ, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ವಿಶಾಲ ಹೃದಯ ಅವರಿಗೆ ಇರಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ -ಜೆಡಿಎಸ್‌ ಸಂಬಂಧ ಹೇಳಿಕೆ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೊಟ್ಟಂತಹ ಸ್ಥಾನವನ್ನು ನಿಭಾಯಿಸುವ ಸಾಮರ್ಥ್ಯ, ಧೈರ್ಯ ಎರಡನ್ನೂ ಅವರಿಬ್ಬರು ಹೊಂದಿರಲಿಲ್ಲ‌. ಮೈತ್ರಿಯನ್ನು ಸಾವಧಾನ, ಸಂತೋಷದಿಂದ ಮುನ್ನಡೆಸುವುದು ಅವರ ಕರ್ತವ್ಯವಾಗಿತ್ತು. ಜೊತೆಯಾಗಿ ಒಯ್ಯದ್ದಕ್ಕೆ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದರು. ದೇವೇಗೌಡರನ್ನು ಪ್ರಧಾನಿ ಮಾಡಿದ್ದು ಹಾಗೂ ಅವರ ಮಗ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್ ಪಕ್ಷ. ನಮ್ಮ ಪಕ್ಷ ಅವರಿಗೆ ಎಲ್ಲಾ ಅವಕಾಶಗಳನ್ನು ನೀಡಿದೆ” ಎಂದರು‌. ಅವರುಗಳು ಕೊಟ್ಟಂತಹ ಸ್ಥಾನವನ್ನು ನಿಭಾಯಿಸುವ ಸಾಮರ್ಥ್ಯ ಮತ್ತು ಧೈರ್ಯ ಎರಡನ್ನೂ ಹೊಂದಿರಲಿಲ್ಲ‌. ಮೈತ್ರಿಯನ್ನು ಸಾವಧಾನದಿಂದ ಹಾಗೂ ಸಂತೋಷದಿಂದ ಮುನ್ನಡೆಸಿಕೊಂಡು ಹೋಗುವುದು ಅವರ ಕರ್ತವ್ಯವಾಗಿತ್ತು. ಜೊತೆಯಾಗಿ ತೆಗೆದುಕೊಂಡು ಹೋಗದ ಕಾರಣಕ್ಕೆ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು