11:39 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ದೇವೇಗೌಡ ಕುಟುಂಬ ಬಗ್ಗೆ ಅವಹೇಳನ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ವಿರುದ್ಧ ಯುವ ಜೆಡಿಎಸ್ ಪ್ರದರ್ಶನ

31/01/2023, 20:23

ಮಂಗಳೂರು(reporterkarnataka.com): ಮಾಜಿ ಪ್ರಧಾನಿ, ಜನತಾ ದಳ ಹಿರಿಯ ನಾಯಕ ಎಚ್. ಡಿ. ದೇವೇಗೌಡರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ದ ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ನಗರದ ಸರ್ಕಿಟ್ ಹೌಸ್ ಬಳಿ ಮುತ್ತಿಗೆ ಹಾಕಿ ಕಪ್ಪು ಬಾವುಟವನ್ನು ಪ್ರದರ್ಶಿಸಲಾಯಿತು.
ನಂತರ ಮಾತನಾಡಿದ ಅಕ್ಷಿತ್ ಸುವರ್ಣ ಅವರು,
ದೇಶದ ಪ್ರಧಾನಿ ಆಗಿ ದೇವೇಗೌಡರು ನೀಡಿರುವ ಕೊಡುಗೆಯನ್ನು ನಳಿನ್ ಮರೆತಿರಬಹುದು. ಆದರೆ, ದೇಶದ ಜನರು ಮರೆತಿಲ್ಲ. ರಾಜ್ಯದ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿರುವ ದೇವೇಗೌಡರ ಬಗ್ಗೆ ಕೀಳಾಗಿ ಮಾತನಾಡಿರುವ ನಳಿನ್ ಕುಮಾರ್ ಕಟೀಲ್ ಅವರ ವರ್ತನೆ ಖಂಡನೀಯ ಎಂದರು.
ರಾಜಕೀಯದಲ್ಲಿ ತಮ್ಮದೇ ಕೊಡುಗೆ ನೀಡಿರುವ ದೇವೇಗೌಡರ ಕುಟುಂಬ ಹಾಗೂ ಜೆಡಿಎಸ್ ಪಕ್ಷದ ವಿರುದ್ದ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ದೇವೆಗೌಡರ ಕೊಡುಗೆ ಕನಿಷ್ಠ ಒಂದು ಪಾಲು ಸೇವೆಯನ್ನು ನೀಡದ ಇವರಿಗೆ ಗೌಡರ ಕುಟುಂಬದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ನುಡಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಶಾಸಕರನ್ನು ಖರೀದಿ ಮಾಡಿ ಅನೈತಿಕವಾಗಿ ಸರಕಾರ ರಚನೆ ಮಾಡಿದ್ದು ಬಿಟ್ಟರೆ ಇವರ ಸಾಧನೆ ಬೇರೆ ಏನು ಇಲ್ಲ. ಕೂಡಲೇ ಅವರು ದೇವೆಗೌಡರ ಕ್ಷಮೆಯನ್ನು ಯಾಚಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅವರು ಭಾಗವಹಿಸುವ ಎಲ್ಲಾ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು
ಅಕ್ಷಿತ್ ಸುವರ್ಣ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಯುವ ಜಿಲ್ಲಾ ಜೆಡಿಎಸ್ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ಹಾಗೂ ಜಿಲ್ಲಾ ಸಂಘಟನಾ ಉಸ್ತುವಾರಿ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು, ಯುವ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನಯ್, ಗೌತಮ್, ವಿನಿತ್, ರಿನಿತ್, ನಿಶಾಂತ್, ಗಗಾಣೀಶ್ ,ಪ್ರದೀಪ್ ಕೀರ್ತಿಕ್, ಪವನ್, ಧನುಷ್, ಸುಶಾಂತ್, ವಿನಯ್ ,ಜಯದೀಪ್ ಧನುಷ್ ಪೂಜಾರಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು