8:29 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ ಭರವಸೆ

12/12/2025, 21:23

ಬೆಳಗಾವಿ, ಸುವರ್ಣ ವಿಧಾನಸೌಧ
(reporterkarnataka.com):
ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಲು ಏಕಗವಾಕ್ಷಿ ಏಜೆನ್ಸಿ ವತಿಯಿಂದ ಅನುಮೋದನೆ ಪಡೆದು ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ವ್ಯವಹರಣಾ ಸಮಾಲೋಚಕರನ್ನಾಗಿ ನೇಮಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕ ಸಚಿವರ ಪರವಾಗಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಹೇಳಿದರು.
ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ಟಿ.ಡಿ ಅವರು ಸಾಂಬಾರು ಪದಾರ್ಥಗಳ ರಫ್ತು ಅಭಿವೃದ್ಧಿ ಮತ್ತು ಬೆಳವಣಿಗೆಗೆ ಸೂಕ್ತವಾದ ಮೂಲ ಸೌಕರ್ಯಕ್ಕೆ ಸ್ಪೈಸ್ ಪಾರ್ಕ್ ಅಗತ್ಯವಾಗಿದ್ದು, ಆದಷ್ಟು ಬೇಗ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಬೇಕೆಂದು ವಿಧಾನಸಭೆಯಲ್ಲಿ ಮನವಿ ಮಾಡಿದರು.
ಸ್ಪೈಸ್ ಪಾರ್ಕ್ ಅಭಿವೃದ್ಧಿಗೆ ಗುರುತಿಸಲಾಗಿದ್ದ ಜಾಗದ ಭೌತಿಕ ಪರಿಶೀಲನೆಯನ್ನು ಸಾಂಬಾರು ಮಂಡಳಿ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ ಹಾಗೂ ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಕೈಗೊಂಡಾಗ, ಸದರಿ ಜಾಗವು ಸ್ಪೈಸ್ ಪಾರ್ಕ್ ನಿರ್ಮಾಣ ಮಾಡಲುಲ ಸೂಕ್ತವಾಗದೇ ಇರುವ ಹಿನ್ನೆಲೆಯಲ್ಲಿ ಸೂಕ್ತವಾದ ಪರ್ಯಾಯ ಜಾಗವನ್ನು ನೀಡಲು ಕೋರಲಾಗಿತ್ತು. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಹೋಬಳಿ ಲಲಬೆಟ್ಟದಮನೆ ಗ್ರಾಮದಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ ಉದ್ದೇಶಕ್ಕಾಗಿ ತೋಟಗಾರಿಕೆ ಇಲಾಖೆಗೆ ಭೂಮಿ ವರ್ಗಾಯಿಸಿ, ದಿನಾಂಕ 30-5-2025ರಂದು ಆದೇಶ ಹೊರಡಿಸಲಾಗಿದೆ. ಜಮೀನಿನ ಹದ್ದುಬಸ್ತು ಗುರುತಿಸುವಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಪ್ರಸ್ತುತ ವ್ಯವಹರಣಾ ಸಮಾಲೋಚಕರನ್ನು ನೇಮಿಸಿ ವರದಿಯನ್ನು ಸಿದ್ದಪಡಿಸಲು ಸೂಚಿಸಲಾಗಿರುತ್ತದೆ. ವರದಿ ಬಂದ ಕೂಡಲೇ ಆದಷ್ಟು ಶೀಘ್ರವಾಗಿ ಸ್ಪೈಸ್ ಪಾರ್ಕ್ ಕಾರ್ಯಾರಂಭಗೊಳಿಸಲಾಗುವುದು ಎಂದು ವಿಧಾನಸಭೆಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು