6:59 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಚಂದ್ರಮೌಳೇಶ್ವರ ಜಾತ್ರಾ ಮಹೋತ್ಸವದಲ್ಲಿ ಮಕ್ಕಳಿಗೆ ಜಂತುಹುಳು ಮಾತ್ರೆ: ಶಾಸಕ ಅನಿಲ್ ಚಿಕ್ಕಮಾದು ಚಾಲನೆ

13/02/2026, 14:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಮಾನ್ಯ ಅರಣ್ಯ ಮತ್ತು ವಿಹಾರ ಧಾಮದ ಅಧ್ಯಕ್ಷರು ಹಾಗೂ ಶಾಸಕ ಅನಿಲ್ ಚಿಕ್ಕಮಾದು ರವರು ಮಕ್ಕಳಿಗೆ ಜಂತುಹುಳು ಮಾತ್ರೆ ನೀಡುವುದರ ಮೂಲಕ ಚಾಲನೆಯನ್ನು ನೀಡಿದರು.


ಸಂದರ್ಭದಲ್ಲಿ ಮಾತನಾಡಿ 1-19 ವರ್ಷದ ಮಕ್ಕಳಿಗೆ, ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಜಂತುಹುಳು ಮಾತ್ರೆಯನ್ನು ನೀಡುತ್ತಿದ್ದೇವೆ, ನಮ್ಮ ತಾಲ್ಲೂಕಿನ ಅಂಗನವಾಡಿ ಮತ್ತು ಶಾಲೆಯ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಮಾತ್ರೆಯನ್ನು ನೀಡಿ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಲು ತಿಳಿಸಿದರು.
ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ರವಿಕುಮಾರ್ ಟಿ.ರವರು ಮಾತನಾಡಿ ಈ ದಿನ ರಾಜ್ಯದ್ಯಂತ ರಾಷ್ಟ್ರೀಯ ಜಂತು ಹುಳು ನಿವಾರಣ ದಿನ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ಎಚ್ ಡಿ ಕೋಟೆ ತಾಲೂಕಿನಲ್ಲಿ ಒಟ್ಟು 252 ಅಂಗನವಾಡಿಗಳಲ್ಲಿ 7355 ಮಕ್ಕಳು, 151 ಶಾಲೆಗಳಲ್ಲಿ 21 735 ಮಕ್ಕಳುಗಳಿದ್ದು ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಜಂತುಹುಳು ನಿವಾರಣ ಮಾತ್ರೆಯನ್ನು ನೀಡುತ್ತಿದ್ದೇವೆ ಹಾಗೂ ದಿನಾಂಕ 16.2.2026ರಂದು ಮಾಪಾ ಆಫ್ ಡೇ ಎಂದು ಮಾಡಿ ಈ ದಿನ ಬಿಟ್ಟು ಹೋಗಿರೋ ಮಕ್ಕಳಿಗೆ ದಿನಾಂಕ 16 ರಂದು ನೀಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿನಗರ ಸಭೆ ಸದಸ್ಯರಾದ ಪ್ರದೀಪ್ ಕುಮಾರ್. ಗ್ರಾಮ ಅಧ್ಯಕ್ಷರಾದ ಮಹೇಶ್, ಊರಿನ ಮುಖಂಡರಾದ ಮಂಚ್ಚಯ್ಯ, ಮಾಜಿ ಅಧ್ಯಕ್ಷರಾದ ದಿನೇಶ್ , ವೈದ್ಯಾಧಿಕಾರಿಗಳಾದ ಡಾ.ಚಂದ್ರಕಲ, ಸಿಬ್ಬಂದಿ ವರ್ಗದವರಾದ ರವಿರಾಜ್, ದೊರೆ, ಜಯಂತಿ, ಶಶಿಕಲಾ, ಗ್ರಾಮದ ಮುಖಂಡರು, ಮಕ್ಕಳು, ಇನ್ನಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು