ಇತ್ತೀಚಿನ ಸುದ್ದಿ
ಧಾರವಾಡ: ಮಹಿಳೆಯ ತಲೆಗೆ ಕಲ್ಲು ಹೊತ್ತು ಹಾಕಿ ಭೀಕರ ಕೊಲೆ: ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು
15/10/2022, 10:42
ಧಾರವಾಡ(reporter Karnataka.com): ಇಲ್ಲಿನ ಜಿಲ್ಲಾಸ್ಪತ್ರೆ ಸಮೀಪ ಮಹಿಳೆಯೊಬ್ಬರ ತಲೆಗೆ ಕಲ್ಲು ಹೊತ್ತು ಹಾಕಿ ಭೀಕರವಾಗಿ ಕೊಲೆ ಮಾಡಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಜಿಲ್ಲಾಸ್ಪತ್ರೆ ಸಮೀಪದ ಸ್ಪರ್ಶ ಆಸ್ಪತ್ರೆ ಬಳಿ ಅಂಗಾತ ಮಲಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ಮಹಿಳೆಯ ತಲೆಗೆ ದೊಡ್ಡದಾದ ಕಲ್ಲು ಹೊತ್ತು ಹಾಕಿ ಅಮಾನುಷವಾಗಿ ಹತ್ಯೆ ಮಾಡಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ವ್ಯಾಪಕ ಬಲೆ ಬೀಸಿದ್ದಾರೆ. ಧಾರವಾಡ ಉಪ ವಿಭಾಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














