ಇತ್ತೀಚಿನ ಸುದ್ದಿ
ಧರ್ಮಸ್ಥಳ | ಬೋಳಿಯಾರದಲ್ಲಿ ಬೈಕಿಗೆ ಕಾರು ಡಿಕ್ಕಿ: ಸವಾರನಿಗೆ ಗಾಯ
09/03/2026, 22:50
ಬೆಳ್ತಂಗಡಿ(reporterkarnataka.com): ಧರ್ಮಸ್ಥಳ ಗ್ರಾಮದ ಬೋಳಿಯಾರ ಎಂಬಲ್ಲಿ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.
ಬೆಳ್ತಂಗಡಿ ಕಳಂಜ ಗ್ರಾಮ ನಿವಾಸಿ ಮಂಜುನಾಥ (38) ಎಂಬವರು ಮಾ. 8ರಂದು ರಾತ್ರಿ ವೇಳೆ ತನ್ನ ಬೈಕ್ ನಲ್ಲಿ ಧರ್ಮಸ್ಥಳ ಕಡೆಯಿಂದ ಕಳಂಜ ಕಡೆಗೆ ಹೋಗುತ್ತಿದ್ದಾಗ ಧರ್ಮಸ್ಥಳ ಗ್ರಾಮದ ಬೋಳಿಯಾರ ಎಂಬಲ್ಲಿ ಸಚೀನ ಎಂಬವರು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಕಾರು ಚಲಾಯಿಸಿ ಬೈಕಿಗೆ ಡಿಕ್ಕಿ ಹೊಡೆದಿದ್ದರು. ಅಪಘಾತದಲ್ಲಿ ಬೈಕ್ ಸವಾರ ಮಂಜುನಾಥ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದರು. ಕಾರಿನ ಚಾಲಕ ಮತ್ತು ಅಲ್ಲಿ ಸೇರಿದ ಸಾರ್ವಜನಿಕರು ಅವರನ್ನು ಉಜಿರೆಯ ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 17/2026, ಕಲಂ: ಕಲಂ: 281, 125(ಎ) BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.












