10:09 AM Thursday6 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

21/07/2025, 20:29

ಬೆಂಗಳೂರು(reporterkarnataka.com): ಧರ್ಮಸ್ಥಳದ ಬಳಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ ತನಿಖೆ ನಡೆಯಬಾರದು ಎಂದರು.
ದಕ್ಷಿಣ ಭಾರತದಲ್ಲಿ ತಿರುಪತಿ ಹಾಗೂ ಧರ್ಮಸ್ಥಳ ಕೋಟ್ಯಂತರ ಹಿಂದೂಗಳ ಶ್ರದ್ಧಾಕೇಂದ್ರವಾಗಿದೆ. ಧರ್ಮಸ್ಥಳದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಯುವಕನೊಬ್ಬ ವೀಡಿಯೋಗಳನ್ನು ಅಪ್‌ಲೋಡ್‌ ಮಾಡುತ್ತಿದ್ದಾನೆ. ಈ ನಡುವೆ ಕೇರಳ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಕೇರಳ ಸರ್ಕಾರ ಅಲ್ಲಿನ ದೇವಸ್ಥಾನಗಳ ವಿಚಾರದಲ್ಲಿ ಹೇಗೆ ನಡೆದುಕೊಳ್ಳುತ್ತಿದೆ, ಶಬರಿಮಲೆ ಅಯ್ಯಪ್ಪ ದೇವಾಲಯದ ವಿಚಾರದಲ್ಲಿ ಹೇಗೆ ನಡೆದುಕೊಂಡಿದೆ ಎಂಬುದು ಜಗಜ್ಜಾಹೀರಾಗಿದೆ. ಯಾವುದೇ ಕೊಲೆಯಾಗಿದ್ದರೆ ಸ್ಥಳೀಯ ಪೊಲೀಸ್‌ ಠಾಣೆ ತನಿಖೆ ಮಾಡುತ್ತದೆ ಎಂದರು.
ನೂರಾರು ಶವಗಳು ಸಿಕ್ಕಿದೆ ಎಂದರೆ, ಅವರ ಕುಟುಂಬದವರು ದೂರು ದಾಖಲಿಸುತ್ತಾರೆ. ಅಂತಹ ಪ್ರಕರಣ ಎಷ್ಟಿದೆ ಎಂದು ಸರ್ಕಾರ ತಿಳಿಸಬೇಕು. ದೇವಾಲಯ ಮಾತ್ರವಲ್ಲದೆ, ಚರ್ಚ್‌, ಮಸೀದಿ ಮೊದಲಾದ ಧಾರ್ಮಿಕ ಕೇಂದ್ರಗಳ ಬಳಿ ಅನೇಕರು ಸಾಯುತ್ತಾರೆ. ಇಂತಹ ಸಂದರ್ಭಗಳಲ್ಲಿ ಪೊಲೀಸರು ತನಿಖೆ ಮಾಡುತ್ತಾರೆ. ಯಾರೋ ಒಬ್ಬರಿಗೆ 20 ವರ್ಷಗಳ ಬಳಿಕ ಜ್ಞಾನೋದಯವಾಗಿದ್ದು ಹೇಗೆ ಎಂಬ ಪ್ರಶ್ನೆ ಮೂಡುತ್ತದೆ. ಒಂದು ಧರ್ಮಕ್ಕೆ ಅಪಮಾನ ಮಾಡಲು ವಿವಾದ ಮಾಡುವುದು ಸರಿಯಲ್ಲ. ಇದರಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿಯ ವಿಚಾರವೇ ಬರುವುದಿಲ್ಲ. ಆದರೂ ಪದೇ ಪದೆ ಧಾರ್ಮಿಕ ಕೇಂದ್ರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದರು.
ಯಾವುದೇ ವ್ಯಕ್ತಿ ತಪ್ಪು ಮಾಡಿದರೆ, ಆ ವ್ಯಕ್ತಿಯ ಬಗ್ಗೆ ಆರೋಪ ಮಾಡಲಿ. ಆದರೆ ಇಡೀ ಧಾರ್ಮಿಕ ಸಂಸ್ಥೆಯನ್ನು ಗುರಿ ಮಾಡಿ ಮಾತಾಡುವುದು ಸರಿಯಲ್ಲ. ಎಸ್‌ಐಟಿ ತಂಡಕ್ಕೆ ಸರ್ಕಾರ ಬೇರಾವುದೇ ಜವಾಬ್ದಾರಿ ವಹಿಸಬಾರದು. ಈ ತಂಡದ ಪೊಲೀಸರು ಸಂಪೂರ್ಣವಾಗಿ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲಿ ಎಂದರು.
ಇದು ವ್ಯಕ್ತಿಗಳಿಗೆ ಸಂಬಂಧಿಸಿದ ವಿಚಾರವೇ ಹೊರತು, ಧರ್ಮಸ್ಥಳದ ಶ್ರೀ ಮಂಜುನಾಥ ದೇವಾಲಯಕ್ಕೆ ಸಂಬಂಧಿಸಿದ ವಿಷಯವಲ್ಲ. ಯಾರೂ ಧರ್ಮಸ್ಥಳದ ದೇವಾಲಯವನ್ನು ಗುರಿ ಮಾಡಬಾರದು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಮಗಿಂತಲೂ ಹೆಚ್ಚಿನ ದೈವಭಕ್ತರು. ಅವರು ದೇವರ ಇಚ್ಛೆಯಂತೆಯೇ ನಡೆದುಕೊಳ್ಳಲಿ. ಧರ್ಮಸ್ಥಳದ ದೇವಾಲಯದ ಬಗ್ಗೆ ಮನಸ್ಸಿಗೆ ಬಂದಂತೆ ಮಾತಾಡುವುದು ತಪ್ಪು. ಇಂತಹ ಮಾತುಗಳು ಯಾವುದೇ ಸಚಿವರಿಗೆ ಶೋಭೆ ತರುವುದಿಲ್ಲ ಎಂದರು.

*ಅಭಿವೃದ್ಧಿ ಇಲ್ಲದೆ ಗ್ರೇಟರ್‌ ಬೆಂಗಳೂರು ಪ್ರಸ್ತಾಪ:*
ಗ್ರೇಟರ್‌ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದಂತೆ ಉತ್ತರ ನೀಡುವಂತೆ ಸರ್ಕಾರಕ್ಕೆ ಕೋರ್ಟ್‌ ಸೂಚನೆ ನೀಡಿದೆ. ಇದನ್ನೇ ಮುಂದಿಟ್ಟುಕೊಂಡು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಕಸದ ರಾಶಿ ಎಲ್ಲ ಕಡೆ ಇದೆ. ಆಸ್ಪತ್ರೆಗಳಲ್ಲಿ ಸಂಬಳ ಪಾವತಿಯಾಗಿಲ್ಲ. ಶಾಲೆಗಳ ಶಿಕ್ಷಕರನ್ನು ವಜಾ ಮಾಡಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿ ಮಾಡಲಾಗದೆ ಐದು ಪಾಲಿಕೆ ಮಾಡುವ ವಿಷಯವನ್ನು ಮುನ್ನೆಲೆಗೆ ತರಲಾಗಿದೆ. ಎಲ್ಲದಕ್ಕೂ ಜನರ ಮೇಲೆ ತೆರಿಗೆ ಹೇರಲಾಗಿದೆ. ಇ ಖಾತಾದಿಂದಾಗಿ ಎಲ್ಲೂ ನೋಂದಣಿ ಮಾಡಲು ಆಗುತ್ತಿಲ್ಲ. ಕಾಂಗ್ರೆಸ್‌ ವಾಮಮಾರ್ಗದಲ್ಲಿ ಗೆಲ್ಲಲು ಈ ರೀತಿ ಪಾಲಿಕೆಗಳನ್ನು ರಚಿಸುತ್ತಿದೆ. ಬೆಂಗಳೂರನ್ನು ಹೋಳು ಮಾಡುವುದನ್ನು ಬಿಜೆಪಿ ಯಾವಾಗಲೂ ವಿರೋಧ ಮಾಡಲಿದೆ. ವಿಧಾನಸಭೆ ಅಧಿವೇಶನದಲ್ಲೂ ಇದನ್ನು ವಿರೋಧಿಸಲಾಗುವುದು ಎಂದು ತಿಳಿಸಿದರು.
ಮುಡಾ ಹಗರಣದ ವಿರುದ್ಧದ ಬಿಜೆಪಿಯ ಹೋರಾಟದ ಫಲವಾಗಿ ಸಿಎಂ ಸಿದ್ದರಾಮಯ್ಯ ನಿವೇಶನಗಳನ್ನು ವಾಪಸ್‌ ಮಾಡಿದ್ದಾರೆ. ತಪ್ಪಾಗಿದೆ ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಮುಡಾ ಹಗರಣದ ವಿರುದ್ಧದ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು