9:33 PM Wednesday30 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: 30 ಮೃತದೇಹಗಳ ದಾಖಲೆಯಲ್ಲಿ ಭಾರೀ ವ್ಯತ್ಯಾಸ; ಸರಕಾರಕ್ಕೆ ಮಹಿಳಾ ಆಯೋಗ ಪತ್ರ

30/09/2026, 21:26

ಬೆಂಗಳೂರು(reporterkarnataka.com): ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಧರ್ಮಸ್ಥಳ ಪ್ರಕರಣದಲ್ಲಿ ಇದೀಗ ಅತ್ಯಂತ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಸರ್ಕಾರಕ್ಕೆ ಸಲ್ಲಿಸಿರುವ ಪ್ರಾಥಮಿಕ ವರದಿಯಲ್ಲಿ, ಧರ್ಮಸ್ಥಳ ಗ್ರಾಮದಲ್ಲಿ ದಾಖಲಾಗಿರುವ ಅಸ್ವಾಭಾವಿಕ ಸಾವು ಪ್ರಕರಣಗಳ ದಾಖಲೆಗಳಲ್ಲಿ ಭಾರಿ ವ್ಯತ್ಯಾಸಗಳು ಇರುವುದು ಬೆಳಕಿಗೆ ಬಂದಿದೆ.
ಎಸ್‌ಐಟಿ ಸಲ್ಲಿಸಿರುವ ವರದಿಯ ಪ್ರಕಾರ, 1998ರಿಂದ 2014ರವರೆಗಿನ (16 ವರ್ಷಗಳ ಕಾಲಾವಧಿ) ಅಸ್ವಾಭಾವಿಕ ಸಾವುಗಳ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ಧರ್ಮಸ್ಥಳ ಗ್ರಾಮ ಪಂಚಾಯತ್ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ದಾಖಲೆಗಳ ನಡುವೆ ತಾಳೆಯಾಗದ ಭಾರಿ ವ್ಯತ್ಯಾಸ ಪತ್ತೆಯಾಗಿದೆ.

*30 ಮೃತದೇಹಗಳ ದಾಖಲೆ ಗಾಯಬ್!*
ಧರ್ಮಸ್ಥಳ ಗ್ರಾಮ ಪಂಚಾಯತ್ ದಾಖಲೆಗಳ ಪ್ರಕಾರ, ಈ ವ್ಯಾಪ್ತಿಯಲ್ಲಿ ದಫನ ಮಾಡಲಾದ ಒಟ್ಟು ಮೃತದೇಹಗಳ ಸಂಖ್ಯೆ 1,510. ಆದರೆ, ಧರ್ಮಸ್ಥಳ ಪೊಲೀಸ್ ಠಾಣೆಯ ಅಧಿಕೃತ ರಿಜಿಸ್ಟರ್‌ನಲ್ಲಿ ದಾಖಲಾಗಿರುವ ಅಸ್ವಾಭಾವಿಕ ಸಾವುಗಳ ಸಂಖ್ಯೆ ಕೇವಲ 1,480 ಪಂಚಾಯತ್ ದಾಖಲೆಯಲ್ಲಿ ದಫನ ಮಾಡಲಾಗಿದೆ ಎನ್ನಲಾದ ಉಳಿದ 30 ಮೃತದೇಹಗಳ ಕುರಿತು ಪೊಲೀಸ್ ಠಾಣೆಯ ರಿಜಿಸ್ಟರ್‌ನಲ್ಲಿ ಯಾವುದೇ ಮಾಹಿತಿಯಿಲ್ಲದಿರುವುದು ತೀವ್ರ ಅನುಮಾನಗಳಿಗೆ ಕಾರಣವಾಗಿದೆ. ಈ 30 ಮೃತದೇಹಗಳು ಯಾರದ್ದು ಮತ್ತು ಇವುಗಳಿಗೆ ಸಂಬಂಧಿಸಿದ ದಾಖಲೆಗಳು ಎಲ್ಲಿ ಹೋದವು ಎಂಬ ಪ್ರಶ್ನೆ ತನಿಖಾ ಸಂಸ್ಥೆಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ತನಿಖಾ ವ್ಯಾಪ್ತಿ ವಿಸ್ತರಿಸಲು ಮಹಿಳಾ ಆಯೋಗ ಆಗ್ರಹ
ಈ ಸ್ಫೋಟಕ ಬೆಳವಣಿಗೆಯನ್ನು ಗಂಭೀರವಾಗಿ ಪಗಣಿಸಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಎಸ್‌ಐಟಿ ನೀಡಿದ ವರದಿಯ ಆಧಾರದ ಮೇಲೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸುದೀರ್ಘ ಪತ್ರ ಬರೆದಿದೆ. ತನಿಖೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಹಲವು ಪ್ರಮುಖ ನಿರ್ದೇಶನಗಳನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು