ಇತ್ತೀಚಿನ ಸುದ್ದಿ
ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ
10/08/2025, 13:36

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ಬಳಿ
4 ಮಂದಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ 6 ಮಂದಿಯನ್ನು ಬಂಧಿಸಲಾಗಿದೆ.
ಬಿಗ್ ಬಾಸ್ ಸ್ಪರ್ಧಿ ರಜತ್ ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಯೂಟ್ಯೂಬರ್ ಗಳ ಮೇಲೆ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಎಂಬವರನ್ನು ಬಂಧಿಸಿದ್ದಾರೆ. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ನಡೆದ ಗುಂಪು ಘರ್ಷಣೆ ನಡೆದಿತ್ತು.
ಈ ಸಂದರ್ಭದಲ್ಲಿ ನಿಯಂತ್ರಣ ಮಾಡಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.