9:33 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ

15/07/2026, 18:08

ಮಂಗಳೂರು(reporterkarnataka.com): ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಇದೀಗ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ.
ಬೆಳ್ತಂಗಡಿ ಎಸ್‌ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20-11-2025ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ವಿಠಲ್ ಗೌಡ ಹಾಗೂ ಸುಜಾತಾ ಭಟ್ ವಿರುದ್ಧ 3,923 ಪುಟಗಳ ‘ಸುಳ್ಳು ಸಾಕ್ಷ್ಯ’ ವರದಿಯನ್ನು ಸಲ್ಲಿಕೆ ಮಾಡಿದ್ದರು. ಈ ವರದಿಯನ್ನು ಒಪ್ಪಲು ನ್ಯಾಯಾಲಯ ನಿರಾಕರಿಸಿ ಅಂತಿಮ ವರದಿ ನೀಡುವಂತೆ ಸೂಚಿಸಿತ್ತು. ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಮುಂದೆ ಜು.15 ರಂದು ಅಪರಾಹ್ನ 3 ಗಂಟೆಗೆ ಎಸ್‌ಐಟಿ ಮೊದಲಿನ 3,923 ಮತ್ತು ಈಗಿನ 3,082 ಸೇರಿ ಈವರೆಗೆ ತನಿಖೆಯ ಸಂಪೂರ್ಣ ಒಟ್ಟು 7,005 ಪುಟಗಳ ಅಂತಿಮ ವರದಿಯನ್ನು 12 ಫೈಲ್ ಗಳನ್ನು ಮಾಡಿ ಸಲ್ಲಿಸಿದ್ದಾರೆ. ಎಸ್‌ಐಟಿ ಎಸ್ಪಿ ಸಿ.ಎ.ಸೈಮನ್, ಇನ್ ಸ್ಪೆಕ್ಟರ್ ಕುಸುಮಾಧರ್,ಇನ್ ಸ್ಪೆಕ್ಟರ್ ಮಂಜುನಾಥ್ ಹಾಗೂ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು.
ಪ್ರಕರಣದ ಆರೋಪಿ ಚಿನ್ನಯ್ಯ ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು