7:20 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಎಸ್ಐಟಿ ತಂಡದಿಂದ ಸೌಜನ್ಯ ಪರ ಹೋರಾಟಗಾರ ತಿಮರೋಡಿ ಮನೆಗೆ ಎಂಟ್ರಿ; ಸ್ಥಳ ಮಹಜರು

26/08/2025, 13:49

ಉಜಿರೆ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎಸ್ಐಟಿ ಇಂದು ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಡಿ
ತಿಮರೋಡಿ ಅವರ ಉಜಿರೆ ಸಮೀಪದ ಮನೆಗೆ ಎಂಟ್ರಿ ಕೊಟ್ಟಿದೆ.
ಸರ್ಚ್ ವಾರಂಟ್ ಮೂಲಕ ಎಸ್ಐಟಿ ಹಿರಿಯ ಅಧಿಕಾರಿಗಳು ತಿಮರೋಡಿ ಮನೆಗೆ ಪ್ರವೇಶ ಮಾಡಿದ್ದಾರೆ. ಸಾಕ್ಷಿದಾರ, ದೂರುದಾರ ಹಾಗೂ ಆರೋಪಿ ಆಗಿರುವ ಚಿನ್ನಯ್ಯನನ್ನು ಎಸ್ಐಟಿ ತಂಡ ಸ್ಥಳ ಮಹಜರು ನಡೆಸಲು ತಿಮರೋಡಿ ಮನೆಗೆ ಕರೆದು ತಂದಿದೆ.
ದೂರುದಾರ ತಾನು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿದ್ದೆ ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳ ತಂಡವು ಇಂದು ಬೆಳಗ್ಗೆ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ತಿಮರೋಡಿ ಮತ್ತು ಅವರ ಸಹೋದರ ಮೋಹನ್ ಶೆಟ್ಟಿ ಅವರ ಮನೆಗೆ ಬಂದಿದ್ದಾರೆ.
ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25 ರಂದು ಸರ್ಚ್ ವಾರೆಂಟ್ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಸಾಕ್ಷಿ ದೂರುದಾರನನ್ನು ಜೊತೆಯಲ್ಲಿ ಕರೆದುಕೊಂಡು ತಿಮರೋಡಿ ಮನೆಗೆ ಬಂದಿದ್ದು, ಮಹಜರು ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು