ಇತ್ತೀಚಿನ ಸುದ್ದಿ
ಸೆಪ್ಟೆಂಬರ್ 1ರಂದು ಧರ್ಮಸ್ಥಳ ಚಲೋ; ತನಿಖೆ ಎನ್ ಐಎ ವಹಿಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ
25/08/2025, 17:07

ಬೆಂಗಳೂರು(reporterkarnarnataka.com): ಧರ್ಮಸ್ಥಳ ಪ್ರಕರಣವನ್ನು ಎನ್ ಐಎ ತನಿಖೆಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 1ರಂದು ಧರ್ಮಸ್ಥಳ ಚಲೋಗೆ ಕರೆ ಕೊಡುತ್ತಿದ್ದೇವೆ. ಎಲ್ಲಾ ಜಿಲ್ಲೆಗಳಿಂದ ನಮ್ಮ ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸುತ್ತಾರೆ.ರಾಜ್ಯದ ಎಲ್ಲ ಹಿಂದೂಪರ ಸಂಘಟನೆಗಳು ಭಾಗವಹಿಸುತ್ತಾರೆ. ಈ ಧರ್ಮಯುದ್ಧ ಜಾತ್ಯತೀತ ವಾಗಿರುವ ಹಿನ್ನೆಲೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ವಿಜಯೇಂದ್ರ ಹೇಳಿದರು.
ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುವದಿಲ್ಲ.
ಧರ್ಮಸ್ಥಳ ವಿಚಾರದಲ್ಲಿ ಯಾವುದೇ ಹುಡುಗಾಟಿಕೆ ಮಾಡಬಾರದು ಎಂದು ಸುಮ್ಮನೆ ಇದ್ದೆವು. ಆದ್ರೆ ಈಗ ಸುಮ್ಮನೆ ಕೂಡಲು ಆಗುವದಿಲ್ಲ. ನಾನು ಮಂಜುನಾಥ ಸ್ವಾಮಿ ಅವರ ಬಳಿ ಪ್ರಾರ್ಥನೆ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಕೆ. ಗೋಪಾಲಯ್ಯ, ಶಾಸಕ ವಿಶ್ವನಾಥ, ಮಾಜಿ ಶಾಸಕರಾದ ಪ್ರೀತಂಗೌಡ, ನಾರಾಯಣಸ್ವಾಮಿ, ಮುಖಂಡ ತಮ್ಮೇಶ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.