1:15 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಉತ್ಖನನಕ್ಕೆ ಕಾರ್ಯಕ್ಕೆ ಇನ್ನಷ್ಟು ವೇಗ: 3 ಮಂದಿ ತಹಶಿಲ್ದಾರರಿಗೆ ಬುಲಾವ್?

30/07/2025, 12:14

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ ಸಂಬಂಧಿಸಿದಂತೆ ಹೂತಿಟ್ಟ ಶವ ಉತ್ಖನನ ಕಾರ್ಯ ಎರಡನೇ ದಿನವಾದ ಇಂದು ಮುಂದುವರಿಯಲಿದ್ದು, ಉತ್ಖನನಕ್ಕೆ ಇನ್ನಷ್ಟು ವೇಗ ನೀಡಲು ಮೂರು ತಾಲೂಕುಗಳ ತಹಶಿಲ್ದಾರರನ್ನು ಕರೆಸಲಾಗಿದ್ದು, ಏಕಕಾಲದಲ್ಲಿ 3 ಕಡೆ ಅಗೆತ ನಡೆಯಲಿದೆ.
ಜಿಲ್ಲೆಯ 3 ತಾಲೂಕುಗಳ ತಹಶಿಲ್ದಾರರ ಸಮ್ಮುಖದಲ್ಲಿ ಏಕಕಾಲದಲ್ಲಿ 3 ಪ್ರತ್ಯೇಕ ಕಾರ್ಮಿಕರ ತಂಡದಿಂದ ಉತ್ಖನನ ಕಾರ್ಯ ನಡೆಯಲಿದೆ. ಇದು ಸಂರಕ್ಷಿತ ಅರಣ್ಯ ಪ್ರದೇಶವಾಗಿರುವುದರಿಂದ ಇಂದು ಜೆಸಿಬಿ ಬಳಸುವ ಸಾಧ್ಯತೆ ತೀರಾ ಕಡಿಮೆಯಾಗಿದೆ. ಮಾನವ ಶ್ರಮದ ಮೂಲಕ ಉತ್ಖನನ ಕಾರ್ಯ ನಡೆಯಲಿದೆ. ಕಾರ್ಮಿಕರ 3 ತಂಡದಲ್ಲಿ ಕನಿಷ್ಠ 20 ಮಂದಿ ಇರುವ ಸಾಧ್ಯತೆಗಳಿವೆ.
ನಿನ್ನೆ ಮೊದಲ ದಿನ ಶವ ಹೂತಿಟ್ಟ ಸ್ಥಳದಲ್ಲಿ ಅಗೆತ ಆರಂಭಿಸಿದ ವಿಶೇಷ ತನಿಖಾ ತಂಡ(ಎಸ್ಐಟಿ) ಯಾವುದೇ ಅಸ್ತಿಪಂಜರ ಸಿಗದೆ ಬರಿಗೈಯಲ್ಲಿ ವಾಪಸಾಗಿದ್ದು, ಇವತ್ತು ಕನಿಷ್ಠ 3 ಸ್ಥಳಗಳಲ್ಲಿ ಉತ್ಖನನ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ದೂರುದಾರ ಒಟ್ಟು 13 ಸ್ಥಳಗಳನ್ನು ಗುರುತಿಸಿದ್ದ. ಅದರಲ್ಲಿ ನಿನ್ನೆ ಪಾಯಿಂಟ್ ನಂಬರ್ 1ರ ಮಾತ್ರ ಅಗೆತ ಮಾಡಲಾಗಿತ್ತು. ಇದು ನೇತ್ರಾವತಿ ನದಿ ದಡದ ಪ್ರದೇಶವಾಗಿತ್ತು. ಜಾಗದಲ್ಲಿ ಸಾಕಷ್ಟು ಹೂಳು ತುಂಬಿತ್ತು. ಇದೀಗ ಅಸ್ತಿ ಪಂಜರಗಳ ಶೋಧ ಕಾರ್ಯ ಎರಡನೇ ದಿನವೂ ಮುಂದುವರಿಯಲಿದ್ದು ಇಂದು (ಬುಧವಾರ) ದೂರುದಾರ ತೋರಿಸಿದ 3 ಸ್ಥಳಗಳಲ್ಲಿ ಮಣ್ಣು ಅಗೆಯಲು ಎಸ್ಐಟಿ ನಿರ್ಧರಿಸಿದೆ ಎನ್ನಲಾಗಿದೆ.
ಈ ಪ್ರಕ್ರಿಯೆಗೆ ಸ್ಥಳೀಯ ಅಧಿಕಾರಿಗಳ ಸಹಕಾರ ಬೇಕಿದೆ. ಶಿಷ್ಟಾಚಾರದ ಪ್ರಕಾರ ಇದಕ್ಕೆ ಸಂಬಂಧಿತ ಅಧಿಕಾರಿಯಾದ ಪುತ್ತೂರಿನ ಅಸಿಸ್ಟೆಂಟ್ ಕಮಿಷನರ್ ಸ್ಟೆಲ್ಲಾ ವರ್ಗೀಸ್ ಅವರು ಅನುಮತಿ ನಿಡಬೇಕಿದೆ. ಸಿಬ್ಬಂದಿ ಲಭ್ಯತೆ ಮತ್ತು ಇತರ ಸಾಧ್ಯತೆಗಳನ್ನು ನೋಡಿಕೊಂಡು ಉತ್ಖನನಕ್ಕೆ ಅನುಮತಿ ನೀಡುವುದು ಎಸಿಗೆ ಬಿಟ್ಟ ವಿಚಾರವಾಗಿದೆ.
ನಿನ್ನೆ ದೂರುದಾರ ತೋರಿಸಿದ ಮೊದಲ ಪಾಯಿಂಟ್ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಣ್ಣು ಅಗೆಯಲಾಗಿದೆ. ಆದರೆ, 8 ಅಡಿ ಆಳ ಅಗೆದರೂ ಅಲ್ಲಿ ಶವಗಳನ್ನು ಹೂತಿರುವ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಸುಮಾರು 10 ಕಾರ್ಮಿಕರನ್ನು ಒಳಗೊಂಡ ತಂಡವು ಹಾರೆ, ಪಿಕಾಸಿ ಬಳಸಿ ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಣ್ಣು ಅಗೆಯುವ ಕಾರ್ಯ ಆರಂಭಿಸಿತು. ನೇತ್ರಾವತಿ ನದಿಯಿಂದ 10 ಮೀಟರ್ ದೂರದಲ್ಲಿರುವ ಈ ಜಾಗವನ್ನು ಅಗೆದಂತೆ ನೀರು ಜಿನುಗಲಾರಂಭಿಸಿತು. ಜೊತೆಗೆ ಬಿಟ್ಟು ಬಿಟ್ಟು ಧಾರಾಕಾರ ಮಳೆಯೂ ಸುರಿಯುತ್ತಿತ್ತು, ಇದರಿಂದ ಅಗೆಯುವಿಕೆಗೆ ಅಡಚಣೆಯುಂಟಾಯಿತು. ಸಂಜೆ ವೇಳೆಗೆ ಎಸ್‌ಐಟಿ ಅಧಿಕಾರಿಗಳು ಸಣ್ಣ ಜೆಸಿಬಿ ಯಂತ್ರವನ್ನು ಸ್ಥಳಕ್ಕೆ ತರಿಸಿಕೊಂಡು ಅಗೆಯಿಸಿದರು. ಕೊನೆಗೆ ಶ್ವಾನದಳ ಕರೆತಂದು ಪರಿಶೀಲನೆ ನಡೆಸಿದರು. ಆದರೂ, ಶವಗಳನ್ನು ಹೂತಿರುವ ಬಗ್ಗೆ ಯಾವುದೇ ಕುರುಹು ಪತ್ತೆಯಾಗದ ಕಾರಣ ಮೊದಲ ದಿನದ ಅಗೆಯುವ ಕಾರ್ಯವನ್ನು ಸಂಜೆ 6ರ ವೇಳೆಗೆ ಸ್ಥಗಿತಗೊಳಿಸಲಾಯಿತು.
ಇಂದು ದೂರುದಾರ ತೋರಿಸಿದ ಎರಡನೇ ಪಾಯಿಂಟ್‌ನಿಂದ ಮಣ್ಣು ಅಗೆಯುವ ಕಾರ್ಯ ನಡೆಯಲಿದೆ. ಈಗಾಗಲೇ ಗುರುತಿಸಿರುವ 12 ಪಾಯಿಂಟ್‌ಗಳಲ್ಲಿ ಅಗೆತ ಬಾಕಿಯಿದೆ.
ಮೂಲಗಳ ಪ್ರಕಾರ, ದೂರುದಾರ ತಲೆ ಬುರುಡೆಯೊಂದನ್ನು ತಂದಿರುವ ಜಾಗದಲ್ಲಿ ಇಂದು ಅಗೆತ ನಡೆಯಲಿದೆ. ಮಾನವ ಶ್ರಮದ ಮೂಲಕವೇ ಮಣ್ಣು ಅಗೆಯಲಾಗುತ್ತದೆ. ಏಕೆಂದರೆ, ಈ ಪಾಯಿಂಟ್‌ಗಳು ಮೀಸಲು ಅರಣ್ಯ ಪ್ರದೇಶದಲ್ಲಿವೆ. ಅಲ್ಲದೆ, ಅಲ್ಲಿ ನಿನ್ನೆಯಂತೆ ನೀರಿನ ಒರತೆ ಅಡ್ಡಿಯಾಗುವ ಸಾಧ್ಯತೆ ಕಡಿಮೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು