ಇತ್ತೀಚಿನ ಸುದ್ದಿ
ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ: ಗೃಹ ಸಚಿವ ಡಾ. ಪರಮೇಶ್ವರ್
14/08/2025, 19:47

ಬೆಂಗಳೂರು(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ಕುರಿತು ಪ್ರತಿಪಕ್ಷದ ನಾಯಕರು ಸದನದಲ್ಲಿ ಪ್ರಸ್ತಾಪಿಸಿದ್ದು, ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕೇಸ್ ಬಗ್ಗೆ ಎಸ್ ಐಟಿ ತನಿಖೆ ನಡೆಯುತ್ತಿರುವ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ ಎಂದರು.
ವಿಧಾನಸಭೆ ಕಲಾಪದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಧರ್ಮಸ್ಥಳ ಪ್ರಕರಣ ಕುರಿತು ಪ್ರಸ್ತಾಪಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅನಾಮಿಕನಿಂದ ದೂರು ಬಂದಿದೆ. ಜಡ್ಜ್ ಮುಂದೆ 164 ಹೇಳಿಕೆ ನೀಡಿದ್ದಾನೆ. ನ್ಯಾಯಾಧೀಶರ ಸೂಚನೆ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ. ಎಸ್ ಐಟಿ ತನಿಖೆಯಾಗುತ್ತಿದೆ. ಈ ಸಂದರ್ಭದಲ್ಲಿ ಸದನದಲ್ಲಿ ಚರ್ಚೆ ಸರಿಯಲ್ಲ. ಇದು ತನಿಖೆ ಮೇಲೆ ಪರಿಣಾಮ ಬೀರುತ್ತೆ. ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಪರಮೇಶ್ವರ್ ಹೇಳಿದರು.