1:54 AM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಇಂದು 3 ಸ್ಥಳಗಳಲ್ಲಿ ಉತ್ಖನನಕ್ಕೆ ಎಸ್ಐಟಿ ನಿರ್ಧಾರ?

30/07/2025, 11:22

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ ಸಂಬಂಧಿಸಿದಂತೆ ನಿನ್ನೆ ಮೊದಲ ದಿನ ಶವ ಹೂತಿಟ್ಟ ಸ್ಥಳದಲ್ಲಿ ಅಗೆತ ಆರಂಭಿಸಿದ ವಿಶೇಷ ತನಿಖಾ ತಂಡ(ಎಸ್ಐಟಿ) ಯಾವುದೇ ಅಸ್ತಿಪಂಜರ ಸಿಗದೆ ಬರಿಗೈಯಲ್ಲಿ ವಾಪಸಾಗಿದ್ದು, ಇವತ್ತು ಕನಿಷ್ಠ 3 ಸ್ಥಳಗಳಲ್ಲಿ ಉತ್ಖನನ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ದೂರುದಾರ ಒಟ್ಟು 13 ಸ್ಥಳಗಳನ್ನು ಗುರುತಿಸಿದ್ದ. ಅದರಲ್ಲಿ ನಿನ್ನೆ ಪಾಯಿಂಟ್ ನಂಬರ್ 1ರ ಮಾತ್ರ ಅಗೆತ ಮಾಡಲಾಗಿತ್ತು. ಇದು ನೇತ್ರಾವತಿ ನದಿ ದಡದ ಪ್ರದೇಶವಾಗಿತ್ತು. ಜಾಗದಲ್ಲಿ ಸಾಕಷ್ಟು ಹೂಳು ತುಂಬಿತ್ತು. ಇದೀಗ ಅಸ್ತಿ ಪಂಜರಗಳ ಶೋಧ ಕಾರ್ಯ ಎರಡನೇ ದಿನವೂ ಮುಂದುವರಿಯಲಿದ್ದು ಇಂದು (ಬುಧವಾರ) ದೂರುದಾರ ತೋರಿಸಿದ 3 ಸ್ಥಳಗಳಲ್ಲಿ ಮಣ್ಣು ಅಗೆಯಲು ಎಸ್ಐಟಿ ನಿರ್ಧರಿಸಿದೆ ಎನ್ನಲಾಗಿದೆ.
ಈ ಪ್ರಕ್ರಿಯೆಗೆ ಸ್ಥಳೀಯ ಅಧಿಕಾರಿಗಳ ಸಹಕಾರ ಬೇಕಿದೆ. ಶಿಷ್ಟಾಚಾರದ ಪ್ರಕಾರ ಇದಕ್ಕೆ ಸಂಬಂಧಿತ ಅಧಿಕಾರಿಯಾದ ಪುತ್ತೂರಿನ ಅಸಿಸ್ಟೆಂಟ್ ಕಮಿಷನರ್ ಸ್ಟೆಲ್ಲಾ ವರ್ಗೀಸ್ ಅವರು ಅನುಮತಿ ನಿಡಬೇಕಿದೆ. ಸಿಬ್ಬಂದಿ ಲಭ್ಯತೆ ಮತ್ತು ಇತರ ಸಾಧ್ಯತೆಗಳನ್ನು ನೋಡಿಕೊಂಡು ಉತ್ಖನನಕ್ಕೆ ಅನುಮತಿ ನೀಡುವುದು ಎಸಿಗೆ ಬಿಟ್ಟ ವಿಚಾರವಾಗಿದೆ.
ನಿನ್ನೆ ದೂರುದಾರ ತೋರಿಸಿದ ಮೊದಲ ಪಾಯಿಂಟ್ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಣ್ಣು ಅಗೆಯಲಾಗಿದೆ. ಆದರೆ, 8 ಅಡಿ ಆಳ ಅಗೆದರೂ ಅಲ್ಲಿ ಶವಗಳನ್ನು ಹೂತಿರುವ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಸುಮಾರು 10 ಕಾರ್ಮಿಕರನ್ನು ಒಳಗೊಂಡ ತಂಡವು ಹಾರೆ, ಪಿಕಾಸಿ ಬಳಸಿ ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಣ್ಣು ಅಗೆಯುವ ಕಾರ್ಯ ಆರಂಭಿಸಿತು. ನೇತ್ರಾವತಿ ನದಿಯಿಂದ 10 ಮೀಟರ್ ದೂರದಲ್ಲಿರುವ ಈ ಜಾಗವನ್ನು ಅಗೆದಂತೆ ನೀರು ಜಿನುಗಲಾರಂಭಿಸಿತು. ಜೊತೆಗೆ ಬಿಟ್ಟು ಬಿಟ್ಟು ಧಾರಾಕಾರ ಮಳೆಯೂ ಸುರಿಯುತ್ತಿತ್ತು, ಇದರಿಂದ ಅಗೆಯುವಿಕೆಗೆ ಅಡಚಣೆಯುಂಟಾಯಿತು. ಸಂಜೆ ವೇಳೆಗೆ ಎಸ್‌ಐಟಿ ಅಧಿಕಾರಿಗಳು ಸಣ್ಣ ಜೆಸಿಬಿ ಯಂತ್ರವನ್ನು ಸ್ಥಳಕ್ಕೆ ತರಿಸಿಕೊಂಡು ಅಗೆಯಿಸಿದರು. ಕೊನೆಗೆ ಶ್ವಾನದಳ ಕರೆತಂದು ಪರಿಶೀಲನೆ ನಡೆಸಿದರು. ಆದರೂ, ಶವಗಳನ್ನು ಹೂತಿರುವ ಬಗ್ಗೆ ಯಾವುದೇ ಕುರುಹು ಪತ್ತೆಯಾಗದ ಕಾರಣ ಮೊದಲ ದಿನದ ಅಗೆಯುವ ಕಾರ್ಯವನ್ನು ಸಂಜೆ 6ರ ವೇಳೆಗೆ ಸ್ಥಗಿತಗೊಳಿಸಲಾಯಿತು.
ಇಂದು ದೂರುದಾರ ತೋರಿಸಿದ ಎರಡನೇ ಪಾಯಿಂಟ್‌ನಿಂದ ಮಣ್ಣು ಅಗೆಯುವ ಕಾರ್ಯ ನಡೆಯಲಿದೆ. ಈಗಾಗಲೇ ಗುರುತಿಸಿರುವ 12 ಪಾಯಿಂಟ್‌ಗಳಲ್ಲಿ ಅಗೆತ ಬಾಕಿಯಿದೆ.
ಮೂಲಗಳ ಪ್ರಕಾರ, ದೂರುದಾರ ತಲೆ ಬುರುಡೆಯೊಂದನ್ನು ತಂದಿರುವ ಜಾಗದಲ್ಲಿ ಇಂದು ಅಗೆತ ನಡೆಯಲಿದೆ. ಮಾನವ ಶ್ರಮದ ಮೂಲಕವೇ ಮಣ್ಣು ಅಗೆಯಲಾಗುತ್ತದೆ. ಏಕೆಂದರೆ, ಈ ಪಾಯಿಂಟ್‌ಗಳು ಮೀಸಲು ಅರಣ್ಯ ಪ್ರದೇಶದಲ್ಲಿವೆ. ಅಲ್ಲದೆ, ಅಲ್ಲಿ ನಿನ್ನೆಯಂತೆ ನೀರಿನ ಒರತೆ ಅಡ್ಡಿಯಾಗುವ ಸಾಧ್ಯತೆ ಕಡಿಮೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು