2:01 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ವಿವಾಹ ರದ್ದು: ತಮ್ಮ ತಮ್ಮ ಊರಲ್ಲೇ ಸರಳ ಮದುವೆಗೆ ಅವಕಾಶ

22/04/2021, 04:42

ಧರ್ಮಸ್ಥಳ(reporterkarnataka news):

ಕೋವಿಡ್-19 ಕುರಿತು ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿಯ ಪ್ರಕಾರ

ಏ.29ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಯೋಜಿಸಲಾದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದ್ದು, ತಮ್ಮ ತಮ್ಮ ಊರಿನಲ್ಲೇ ಸರಳ ವಿವಾಹಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಸಾಮೂಹಿಕ ವಿವಾಹಕ್ಕೆ ನೋಂದಾಯಿಸಿಕೊಂಡಿರುವ ಎಲ್ಲ ಜೋಡಿಗಳಿಗೂ ಕ್ಷೇತ್ರದ ವತಿಯಿಂದ ಆಶೀರ್ವಾದಪೂರ್ವಕವಾಗಿ ನೀಡಲಾಗುವ ವಿವಾಹ ಸಂಬಂಧಿ ವಸ್ತುಗಳಾದ ಧೋತಿ, ಸೀರೆ, ರವಿಕೆ ಕಣ, ಮಂಗಳಸೂತ್ರ ಇತ್ಯಾದಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಮುಖೇನ ವಧು-ವರರ ಮನೆಗೆ ಮುಟ್ಟಿಸಲಾಗುವುದು. ಏ.29 ರಂದು ನಿಗದಿತವಾಗಿರುವ ಗೋಧೋಳಿ ಲಗ್ನದಲ್ಲಿ ಅಥವಾ ತಮಗೆ ಅನುಕೂಲವಾದ ದಿನಾಂಕ ಮತ್ತು ಮುಹೂರ್ತದಲ್ಲಿ ನೋಂದಾಯಿಸಿಕೊಂಡಿರುವ ವಧು-ವರರು ತಮ್ಮ ತಮ್ಮ ಊರಿನ ಅಥವಾ ಕುಲದೇವರ ಸ್ಥಾನಗಳಲ್ಲಿ ಶಾಸ್ತ್ರೋಕ್ತವಾಗಿ ಮದುವೆ ಮಾಡಿಕೊಳ್ಳಬಹುದು.

ಈ ಸಂದರ್ಭ ಯೋಜನೆಯ ಕಾರ್ಯಕರ್ತರೋರ್ವರು ಹಾಜರಿದ್ದು, ಮದುವೆಯನ್ನು ಸರಳವಾಗಿಯೂ, ಸರಕಾರದ ಕೋವಿಡ್ ಶರತ್ತುಬದ್ಧ ನಿಯಮಾವಳಿಯಂತೆ ಆಚರಿಸಿಕೊಳ್ಳುವಂತೆ ಸೂಚಿಸಲಾಗಿದೆ. ನಂತರ ಕಾನೂನಿನಂತೆ ತಾಲೂಕಿನ ಉಪ ನೋಂದಾವಣಾಧಿಕಾರಿಯವರಲ್ಲಿ ವಿವಾಹ ನೋಂದಣಿಯನ್ನು ಮಾಡಿಕೊಳ್ಳಬಹುದು. ವಿವಾಹ ದಾಖಲಾತಿ ಮಾಹಿತಿಯನ್ನು ಕ್ಷೇತ್ರಕ್ಕೆ ಕಳುಹಿಸಿಕೊಡಬೇಕು ಎಂದು ಶ್ರೀ ಕ್ಷೇತ್ರದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು