8:07 PM Saturday29 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಧರ್ಮಸ್ಥಳ | ಬಾಲಕಿಯ ಅತ್ಯಾಚಾರ: ಪೋಕ್ಸೋ ಆರೋಪಿಯ ದೊಡ್ಡಬಳ್ಳಾಪುರದಲ್ಲಿ ಬಂಧನ

29/08/2026, 20:06

ಮಂಗಳೂರು(reporterkarnataka.com): ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಲ್ಲಿ ಆರೋಪಿಯನ್ನು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯೋರ್ವಳನ್ನು ಪ್ರಕರಣದ ಆರೋಪಿಯಾದ ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್‌ (21) ಎಂಬಾತನು 2025ನೇ ಸಾಲಿನ ಸೆಪ್ಟೆಂಬರ್‌-ನವೆಂಬರ್‌ ಅವಧಿಯಲ್ಲಿ ಬಲವಂತವಾಗಿ ಅತ್ಯಾಚಾರ ಮಾಡಿ, ಯಾರಿಗೂ ತಿಳಿಸದಂತೆ ಬೆದರಿಕೆ ಒಡ್ಡಿದ್ದು, ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿರುತ್ತಾಳೆ. ಈ ಬಗ್ಗೆ ದಿನಾಂಕ 23.08.2026 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:60/2026, ಕಲಂ 64(2)(m),65(1),351(2) BNS ಕಲಂ:4(2),6 ಪೋಕ್ಸೋ ಪ್ರಕರಣದ ದಾಖಲಿಸಿಕೊಂಡು ತನಿಖೆ ಪ್ರಗತಿಯಲ್ಲಿರುತ್ತದೆ. ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ ಆರೋಪಿ ಶ್ರೀಕಾಂತ್‌ ನನ್ನು ಧರ್ಮಸ್ಥಳ ಠಾಣಾ ಪಿ.ಎಸ್.ಐ ಸಮರ್ಥ್ ಆರ್. ಗಾಣಿಗೇರ, ಧರ್ಮಸ್ಥಳ ಠಾಣಾ HC 418 ವೃಷಭ, HC 369 ಮಹೇಶ್, ಸಿಪಿಸಿ 975 ಚರಣ್ ರಾಜ್ ಎಂಬವರುಗಳ ತಂಡ ಆಗಸ್ಟ್ 25 ರಂದು ಬೆಂಗಳೂರಿನ ದೊಡ್ಡಬಳ್ಳಾಪುರ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು