ಇತ್ತೀಚಿನ ಸುದ್ದಿ
ಧರ್ಮಸ್ಥಳಕ್ಕೆ ಚಿಕ್ಕಮಗಳೂರಿನಿಂದ ಪಾದಯಾತ್ರೆಯಲ್ಲಿ ಬಂದ ವ್ಯಕ್ತಿ ನೇತ್ರಾವತಿಯಲ್ಲಿ ಮುಳುಗಿ ಸಾವು
02/03/2022, 10:11
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಬಂದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದ ನೇತ್ರಾವತಿಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಗೌದನಹಳ್ಳಿ ನಿವಾಸಿ ಚಂದ್ರಶೇಖರ್(40) ಸಾವನ್ನಪ್ಪಿದವರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಚಂದ್ರಶೇಖರ್ ಸ್ನೇಹಿತನಾದ ವೆಂಕಟೇಶ್ ಜೊತೆ ಧರ್ಮಸ್ಥಳಕ್ಕೆ ಚಾರ್ಮಾಡಿ ಘಾಟ್ ಮೂಲಕ ಪಾದಯಾತ್ರೆ ಮಾಡಿಕೊಂಡು ಇಂದು ಧರ್ಮಸ್ಥಳ ನೇತ್ರಾವತಿಗೆ ಬಂದಿದ್ದು ಈ ವೇಳೆ ಸ್ನಾನ ಮಾಡಲು ಇಳಿದಿದ್ದು ಈಜಲು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಶವಪರೀಕ್ಷೆಗೆ ತರಲಾಗಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು.