5:30 PM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

19/07/2026, 21:41

ಬೆಂಗಳೂರು(reporterkarnataka.com): ಸುಮಾರು 100ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿ ಅವುಗಳ ಮಾಂಸವನ್ನು ಅಕ್ರಮವಾಗಿ ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಪ್ರಕರಣವನ್ನು ಉಪ ನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರ ಸಹಾಯದಿಂದ ಉಪ ನಗರ ಪೊಲೀಸರು ಪ್ರಕರಣ ಬೆಳಕಿಗೆ ತಂದು ದೂರು ದಾಖಲಿಸಿದ್ದಾರೆ. ಬೆಳಗಾವಿಯ ಆಟೋ ನಗರದಲ್ಲಿ ಅಮೂಲ್ ಫ್ಯಾಕ್ಟರಿಯಲ್ಲಿ ಈ ಹತ್ಯೆ ಮಾಡಿ ಮಾಂಸವನ್ನು ಬೆಂಗಳೂರಿನ ನೀಲಸಂದ್ರಕ್ಕೆ ಕಳುಹಿಸಲಾಗುತ್ತಿತ್ತು ಎಂಬ ಮಾಹಿತಿ ಇದೆ. ಕೆಲಗೇರಿ ಬೈಪಾಸ್‌ ಬಳಿ ಲಾರಿಯನ್ನು ನಿಲ್ಲಿಸಿ ಪರಿಶೀಲಿಸಿದಾಗ ಈ ವಿಷಯ ಗೊತ್ತಾಗಿದೆ. ಮಾಂಸ ಸಾಗಿಸುತ್ತಿದ್ದ ಲಾರಿ ಚಾಲಕ ಹಾಗೂ ಕ್ಲೀನರ್‌ನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ಉಪ ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ. ಜಾನುವಾರು ಕಳ್ಳತನದ ಆರೋಪಿಗಳ ಬಂಧನ ರಿಪ್ಪನ್‌ಪೇಟೆ ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕೆಲವು ದಿನಗಳಿಂದ ಗೋವುಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು’ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಕೃತ್ಯಕ್ಕೆ ಬಳಸಿದ್ದ.ಇನ್ನೋವಾ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ಮೂಲದ ಸುಹೇಲ್, ಮಹಮ್ಮದ್ ಇಸ್ರಾರ್ ಖಾನ್ ಬಂಧಿತರು. ಜು.3ರಂದು ಸಾಗರ ರಸ್ತೆಯ ಪಕ್ಕದಲ್ಲಿ ಮಲಗಿದ್ದ ರಾಸುವನ್ನು ಬೆಳಗಿನ ಜಾವ ವಾಹನವೊಂದರಲ್ಲಿ ಹೊತ್ತೊಯ್ದಿದ್ದ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ್ದ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಹೊಸನಗರ ವೃತ್ತ ನಿರೀಕ್ಷಕ ಗೌಡಪ್ಪ ಗೌಡ‌ರ್, ಪಿಎಸ್‌ಐ ರಾಜುರೆಡ್ಡಿ, ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಗೋ ಕಳ್ಳತನ ಮಾಡುತ್ತಿದ್ದವರನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು